ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಸುಮಾರು 3 ಎಕರೆ ಜಮೀನು ಹೊಂದಿರುವ ರೈತ ಬೆಳೆ ಸಾಲ ಮಾಡಿಕೊಂಡಿದ್ದ. ಆದರೆ ಬೆಳೆ ಮಳೆಯಿಂದ ನಷ್ಟವಾಗಿದೆ.

ಫರಹತಾಬಾದ್ ಹೋಬಳಿ ವ್ಯಾಪ್ತಿಯ ಕವಲಗಾ ಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ ಹಣಮಂತ ತಂದೆ ಬಸವರಾಜ ಮೊಸಂಡಿ (35) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.

ರೈತ 3 ಎಕರೆ ಜಮೀನು ಹೊಂದಿದ್ದು, ಫರಹತಬಾದ್ ಬ್ಯಾಂಕ್ ಆಫ್ ಬರೋಡ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 2 ಲಕ್ಷ ರೂ. ಬೆಳೆ ಸಾಲ ಮಾಡಿದ್ದ. ಕೃಷಿಗಾಗಿ ಖಾಸಗಿ ಸಾಲ 35,0000 ಸೇರಿ ಒಟ್ಟು ಏಳುವರೆ ಲಕ್ಷ ಸಾಲ ಮಾಡಿಕೊಂಡಿದ್ದ.

ಸದ್ಯ ಹತ್ತಿ ಮತ್ತು ತೊಗರಿ ಬೆಳೆದಿದ್ದ. ಆದರೆ ಅತಿಯಾದ ಮಳೆ ನೀರಿನಿಂದ ಬೆಳೆ ಕೊಚ್ಚಿಕೊಂಡು ಹೋಗಿದೆ. ಆದ್ದರಿಂದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ರೈತ ಒಂದು ಗಂಡು ಮಗು, ಪತ್ನಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಫರಹತಬಾದ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮ್ಮಶೆಟ್ಟಿ, ರಾಯಪ್ಪ ಹುರಮುಂಜಿ ಆಗ್ರಹಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...