ಕಲಬುರಗಿ| ಬೈಕ್ ಕಳ್ಳನ ಬಂಧನ; 2.75 ಲಕ್ಷ ಮೌಲ್ಯದ 6 ಬೈಕ್ ವಶ

Date:

Share post:

ಕಲಬುರಗಿ: ಕಲಬುರಗಿ ನಗರದ ವಿವಿಧ ಸ್ಥಳಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ 2.75 ಲಕ್ಷ ಮೌಲ್ಯದ 6 ಬೈಕ್ ವಶಕ್ಕೆ ಪಡೆಯುವಲ್ಲಿ ಇಲ್ಲಿನ ರಾಘವೇಂದ್ರ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೀದರ್ ನಗರ ನಿವಾಸಿ, ಚಾಸ್ಮೆ ವ್ಯಾಪಾರಿಯಾಗಿರುವ ಗುಲಾಮ ಅಲಿ ಫಾರುದ್ದೀನ ಝಾಫ್ರಿ(50) ಬಂಧಿತ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಖಾದ್ರಿ ಚೌಕ್ ನಿವಾಸಿ ಮಹ್ಮದ ಜಾಫರ್ ಗಪೂರ ಎಂಬಾತರು ಆಗಸ್ಟ್ 13 ರಂದು ನೀಡಿದ ದೂರಿನ ಮೇರೆಗೆ ರಾಘವೇಂದ್ರ ನಗರ ಠಾಣೆಯಲ್ಲಿ ಪೊಲೀಸರು ಗುನ್ನೆ ನಂ: 103/2025 ಕಲಂ 303(2) ಬಿ.ಎನ.ಎಸ್ ಆಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ತನಿಖಾ ತಂಡವನ್ನು ರಚಿಸಿ ಆರೋಪಿಯನ್ನು ಬಂಧಿಸಲು ಬಲೆ ಬೀಸಿದ್ದರು. ಕೊನೆಯಲ್ಲಿ ಆರೋಪಿಯನ್ನು ಶಂಕಿಸಿ, ಆತನನ್ನು ವಿಚಾರಣೆಗೆ ಒಳಪಡಿದಾಗ ಆತ ಬೈಕ್ ಕಳ್ಳತನ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...