ಕಲಬುರಗಿ| 43 ಗ್ರಾಂ ಬಂಗಾರ ಕಳ್ಳತನ; ಕಳ್ಳರ ಆಟ ಸಿಸಿ ಕ್ಯಾಮೆರಾದಲ್ಲಿ ಸೆರೆ

Date:

Share post:

ಕಲಬುರಗಿ: 43 ಗ್ರಾಂ. ಬಂಗಾರದ ಆಭರಣಗಳು, 150 ಗ್ರಾಂ. ಬೆಳ್ಳಿ ಹಾಗೂ 1 ಲಕ್ಷ ರೂಪಾಯಿ ನಗದು ಹಣ ಕಳ್ಳತನವಾಗಿರುವ ಘಟನೆ ನಗರದ ಪಾರ್ವತಿ ಲೇಔಟ್ ಪ್ರದೇಶದಲ್ಲಿ ನಡೆದಿದೆ.

ಪಾರ್ವತಿ ಲೇಔಟ್ ನ ನಿವಾಸಿ ಶರಣಬಸಪ್ಪ ಶಂಕ್ರಪ್ಪ ಚೌಧರಿ ಎಂಬಾತರ ಮನೆಯಲ್ಲೇ ಕಳ್ಳತನವಾಗಿರುವುದು ತಿಳಿದುಬಂದಿದೆ.

ಶನಿವಾರ ತಡರಾತ್ರಿ ವೇಳೆಗೆ ಯಾರೋ ಕಳ್ಳರು ನಮ್ಮ ಮನೆಯ ಬಾಗಿಲಿನ ಕೊಂಡಿ ಮುರಿದು ಒಳಗೆ ಪ್ರವೇಶ ಮಾಡಿ ಮನೆಯಲ್ಲಿ ಅಲಮಾರದಲ್ಲಿ ಇಟ್ಟಿದ್ದ 1 ಲಕ್ಷ ರೂ. ನಗದು ಹಣ, 15 ಗ್ರಾಂನ ನಗರದ ಲಾಕೇಟ್, 5 ಗ್ರಾಂನ ಬಂಗಾರದ 3 ಸುತ್ತುಂಗುರಗಳು, 5 ಗ್ರಾಂ. ಬಂಗಾರದ ಒಂದು ಜೊತೆ ಕಿವಿಯೊಲೆ, ಬಂಗಾರದ 3 ಗ್ರಾಂನ ಉಂಗುರ, ಬಂಗಾರದ 5 ಗ್ರಾಂನ ನಾಣ್ಯ ಸೇರಿದಂತೆ 150 ಗ್ರಾಂ. ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ.

ಮನೆ ಕಳ್ಳತನ ನಡೆದಿರುವ ನಿವಾಸದ ಮುಂದೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಕಳ್ಳತನಕ್ಕೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಅಶೋಕ್ ನಗರ ಪೊಲೀಸರು, ಅನುಮಾನಾಸ್ಪದ ವ್ಯಕ್ತಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...