ಕಲಬುರಗಿ| 40 ಲಕ್ಷ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಎಸಿಪಿ ಶರಣಬಸಪ್ಪ ಸುಬೇದಾ‌ರ್

Date:

Share post:

ಕಲಬುರಗಿ: ಪ್ರಕರಣವೊಂದರ ತನಿಖೆ ಮುಗಿಸುವ ಕಾರಣಕ್ಕಾಗಿ 40 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು ಹಣ ಪಡೆಯುತ್ತಿರುವಾಗಲೇ ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ಉಪ ವಿಭಾಗದ ಎಸಿಪಿ ಸೇರಿದಂತೆ ಐವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಶುಕ್ರವಾರ ನಡೆದಿದೆ.

ಇಲ್ಲಿನ ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ಉಪ ವಿಭಾಗದ ಎಸಿಪಿ ಆಗಿರುವ ಶರಣಬಸಪ್ಪ ಸುಬೇದಾ‌ರ್, ರೈಟರ್ ಚಂದ್ರಕಾಂತ್, ಕಾನ್ಸಟೇಬಲ್ ರಾಘವೇಂದ್ರ, ಇಬ್ಬರು ಖಾಸಗಿ ವ್ಯಕ್ತಿ ದಸ್ತಗೀ‌ರ್, ಶಿವಪ್ಪ ಸೇರಿ ಒಟ್ಟು ಐವರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ಐವರು ಸಹ ಪ್ರಕರಣವೊಂದರ ತನಿಖೆ ಮುಗಿಸುವ ಸಂಬಂಧ ರೇವಣಸಿದ್ದಪ್ಪ ಎಂಬುವರ ಬಳಿ 40 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಎಸ್ಪಿ ಬಿ.ಕೆ ಉಮೇಶ್‌ ನೇತೃತ್ವದಲ್ಲಿ ನಡೆಸಿ ದಾಳಿಯಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...