ಕಲಬುರಗಿ| ಗಣೇಶ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Date:

Share post:

ಕಲಬುರಗಿ: ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ 2025ರ ಆಗಸ್ಟ್ 31ರ ಬೆಳಿಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 1 ಬೆಳಗಿನ 6 ಗಂಟೆಯವರೆಗೆ ಎಲ್ಲಾ ತರಹದ ಮದ್ಯ ಮಾರಾಟವನ್ನು ನಿಷೇಧಿಸಿ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮಾರಾಟವನ್ನು ನಿಷೇಧಿಸಿ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ.

ಈ ಹಬ್ಬದ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...