ಕಲಬುರಗಿ| ಸಿಎಂ ಸಿದ್ದರಾಮಯ್ಯಗೆ ಅವಹೇಳನ ಆರೋಪ; ಪಿಡಿಓ ವಿರುದ್ಧ ಎಫ್ಐಆರ್ ದಾಖಲು 

Date:

Share post:

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರಿಗೆ ‘ಸಿದ್ರಾಮುಲ್ಲಾ’ ಎಂದು ಅವಹೇಳನಕಾರಿಯಾಗಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿರುವ ಆರೋಪದ ಮೇರೆಗೆ ಪಿಡಿಓ ವೊಬ್ಬರ ವಿರುದ್ಧ ಆಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಬೆಳಗ್ಗೆ ಪ್ರಕರಣ ದಾಖಲಾಗಿದೆ.

ಆಳಂದ ತಾಲ್ಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಪಿಡಿಒ ಪ್ರವೀಣಕುಮಾ‌ರ್ ಉಡಗಿ ವಿರುದ್ಧವೇ ಅದೇ ಗ್ರಾಮದ ಮುಖಂಡ ಮಲ್ಲಿಕಾರ್ಜುನ ದಣ್ಣೂರ ಎಂಬಾತರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಆಗಸ್ಟ್ 21ರಂದು ಆರೋಪಿ ಆಗಿರುವ ಪಿಡಿಓ ಪ್ರವೀಣಕುಮಾರ್ ತಮ್ಮ ಮೊಬೈಲ್ ನಲ್ಲಿ ‘ಸಿದ್ರಾಮುಲ್ಲಾ’ ಎಂದು ಬರೆಯುವುದರ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿಗೆ ಹಾಕಿರುವಂತೆ ಎಡಿಟ್‌ ಮಾಡಲಾದ ಚಿತ್ರವನ್ನು ಸ್ಟೇಟಸ್ ಇಟ್ಟುಕೊಂಡಿದ್ದರು. ಚಿತ್ರದಲ್ಲಿ ‘ಸಿದ್ರಾಮುಲ್ಲಾನ ಬಜೆಟ್ ನಲ್ಲಿ ಕೃಷಿಕರಿಗೆ ಬೆಲೆನೇ ಇಲ್ವಾ? ರೈತರ ಕಷ್ಟ ಹಾಗೂ ನಷ್ಟಗಳಿಗಿಂತ ಮುಸ್ಲಿಂ ಕಾಂಟ್ರಾಕ್ಟರ್ ಮಹತ್ವದ್ದಾಗಿದೆ’ ಎಂದು ಬರೆದುಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಪಿಡಿಓ ಪ್ರವೀಣಕುಮಾರ್ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...