ಕಲಬುರಗಿ ತಾಲೂಕಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ

Date:

Share post:

ಕಲಬುರಗಿ: ಮುಂಬರುವ ಸೆ.6 ರಂದು ನಗರದ ಕನ್ನಡ ಭವನದಲ್ಲಿ ಜರುಗಲಿರುವ ಕಲಬುರಗಿ ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ನಾಡಿನ ವಿಮರ್ಶಕ, ಸಾಹಿತಿ ಡಾ. ಶ್ರೀಶೈಲ ನಾಗರಾಳ ಅವರಿಗೆ ರವಿವಾರ ಅವರ ಗೃಹದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅಧಿಕೃತ ಆಹ್ವಾನ ನೀಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ತಾಲೂಕಾಧ್ಯಕ್ಷ ಶಿವಲೀಲಾ ಕಲಗುರ್ಕಿ ಅವರ ನೇತೃತ್ವದಲ್ಲಿ ಅಧಿಕೃತ ಆಹ್ವಾನ ನೀಡುವ ಕಾರ್ಯಕ್ರಮ ವಿಶೇಷವಾಗಿ ನಡೆಸಲಾಯಿತು.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸುಮಾರು 40 ಕ್ಕೂ ಹೆಚ್ಚು ಕೃತಿಗಳನ್ನು ಅರ್ಪಿಸಿರುವ ಡಾ. ಶ್ರೀಶೈಲ ನಾಗರಾಳ ಅವರು, ನಾಡಿನ ಹೆಸರಾಂತ ವಿಮರ್ಶಕರು. ಕಲೆ, ಸಾಹಿತ್ಯ ಮತ್ತು ಸಂಗೀತ ಪರಂಪರೆಯ ಮೌಲ್ಯಗಳನ್ನು ತಮ್ಮ ಸಾಹಿತ್ಯದಲ್ಲಿ ಅಪಾರ ಕೃಷಿ ಮಾಡಿದ್ದಾರೆ. ಇಂಥ ವಿಮರ್ಶಾ ಸಾಹಿತಿಯೊಬ್ಬರನ್ನು ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಆಹ್ವಾನ ಸ್ವೀಕರಿಸಿ ಮಾತನಾಡಿದ ನಿಯೋಜಿತ ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ ಡಾ. ಶ್ರೀಶೈಲ ನಾಗರಾಳ, ಈ ನಾಡಿನ ಭಾಷೆ, ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ ಬೆಳೆಸಬೇಕಾದರೆ ಇಂಥ ಸಮ್ಮೇಳನಗಳು ಅವಶ್ಯವಾಗಿವೆ. ಕಲ್ಯಾಣ ಕರ್ನಾಟಕ ಭಾಗವು ಸಾಹಿತ್ಯ, ಇತಿಹಾಸದ ವೈಭವ ಹೊಂದಿದೆ. ಈ ನಿಟ್ಟಿನಲ್ಲಿ ಸಂಶೋಧನಾ ಕಾರ್ಯಗಳು ನಡೆಯಬೇಕಾಗಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

 

ಕೇಂದ್ರ ಕಸಾಪ ದ ಪ್ರತಿನಿಧಿ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ಜಿಲ್ಲಾ ಕಸಾಪ ಕಾರ್ಯದರ್ಶಿ ಧರ್ಮಣ್ಣ ಎಚ್. ಧನ್ನಿ, ತಾಲೂಕಾಧ್ಯಕ್ಷೆ ಶಿವಲೀಲಾ ಕಲಗುರ್ಕಿ, ಪ್ರಮುಖರಾದ ಎಂ.ಬಿ. ಕಟ್ಟಿ, ಡಾ. ರೆಹಮಾನ್ ಪಟೇಲ್, ಸಿದ್ಧಲಿಂಗ ಬಾಳಿ, ವಿಶಾಲಾಕ್ಷಿ ಮಾಯಣ್ಣವರ್, ಮಲ್ಲಿಕಾರ್ಜುನ ಇಬ್ರಾಹಿಂಪುರ, ಮಹಾನಂದಾ ಹುಲಿ, ಭಾಗ್ಯಶ್ರೀ ಮರಗೋಳ, ಕವಿತಾ ಕವಳೆ, ಸುನೀತಾ ಮಾಳಗಿ, ಲಲಿತಾ ಪಾಟೀಲ, ಶಾರದಾ ಕಂದಗುಳೆ, ಜಯಶ್ರೀ, ರವೀಂದ್ರಕುಮಾರ ಭಂಟನಳ್ಳಿ, ಜಗದೀಶ ಮರಪಳ್ಳಿ, ಪ್ರಭವ ಪಟ್ಟಣಕರ್, ಶೇಖ್ ಸಮ್ರೀನ್, ಸಂತೋಸ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ಈರಣ್ಣಾ ಸೋನಾರ, ರಮೇಶ ಡಿ ಬಡಿಗೇರ, ಶರಣು ಹಾಗರಗುಂಡಗಿ, ಧರ್ಮರಾಜ ಜವಳಿ, ಕುಶಾಲ ದರ್ಗಿ, ಎಂ.ಎನ್. ಸುಗಂಧಿ, ರಾಜೇಂದ್ರ ಮಾಡಬೂಳ ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...