ಒಂದು ಭಾಷೆಗಿಂತ ಹೆಚ್ಚು ಭಾಷೆ ಕಲಿಯುವುದು ಅನಿವಾರ್ಯ: ಡಾ. ಚವ್ಹಾಣ

Date:

Share post:

ಕಲಬುರಗಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಾವು ಕೇವಲ ಒಂದು ಭಾಷೆಗೆ ಸೀಮಿತವಾಗದೇ ಹೆಚ್ಚು ಹೆಚ್ಚು ಭಾಷೆಗಳು ಕಲಿಯುವುದು ಅನಿವಾರ್ಯ ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಪ್ರೇಮಚಂದ ಚವ್ಹಾಣ ಹೇಳಿದರು.

ನಗರದ ಸ್ವಾಯತ್ತ ಮಹಾವಿದ್ಯಾಲಯವಾದ ಸರಕಾರಿ ಮಹಾವಿದ್ಯಾಲಯದ ಹಿಂದಿ ವಿಭಾಗದ ಸ್ನಾತಕೋತ್ತರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳುಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದ್ದರು.

ಮುಂದುವರೆದು ಮಾತನಾಡಿದ ಅವರು, ಇಂದು ನಾವು ನಮ್ಮ ಮಾತೃ ಭಾಷೆಯೊಂದಿಗೆ ಹೆಚ್ಚು ಹೆಚ್ಚು ಭಾಷೆ ಕಲಿಯುವುದು ಅನಿವಾರ್ಯ, ಭಾರತದ ಮೂಲೆ ಮೂಲೆಗಳಲ್ಲಿ ಕೆಲಸ ಮಾಡಬೇಕಾದ ಸಂದರ್ಭ ಬಂದರೆ ಆ ಸಂದರ್ಭದಲ್ಲಿ ಬೇರೆ ಸಂಪರ್ಕ ಭಾಷೆಯ ಅನಿವಾರ್ಯತೆ ಬೇಕಾಗುತ್ತದೆ. ಹೀಗಾಗಿ ನಮಗೆ ಕೇವಲ ಒಂದು ಭಾಷೆಗೆ ಸೀಮಿತವಾಗದೇ ಹೆಚ್ಚು ಹೆಚ್ಚು ಭಾಷೆಗಳು ಕಲಿಯುವುದು ಅನಿವಾರ್ಯ ಎಂದು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಸವಿತಾ ತಿವಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯದಲ್ಲಿ ಒಂದು ಒಳ್ಳೆಯ ವ್ಯಕ್ತಿಗಳಾಗಿ ದೇಶದ ನಿರ್ಮಾಣದಲ್ಲಿ ಕೈ ಜೋಡಿಸುವಂತೆ ಮನವಿ ಮಾಡಿದರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ.ಅನುಸೂಯಾ ಗಾಯಕ್ವಾಡ್, ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಶಂಕರ ರಾಠೋಡ, ವಿಭಾಗದ ಹಿರಿಯ ಉಪನ್ಯಾಸಕರಾದ ಡಾ.ಮಿಲನ ಕಾಂಬ್ಳೆ ಮತ್ತು ವಿಭಾಗದ ಪ್ರಥಮ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...