ಕಲಬುರಗಿ| ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ಸೆಪ್ಟೆಂಬರ್ 4 ರಂದು ನೇರ ಸಂದರ್ಶನ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಸೆಪ್ಟೆಂಬರ್ 4ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿಯ ಹುಮನಾಬಾದ್ ರಸ್ತೆಯ ಶಹಾ ಹೊಂಡೈ ಶೋರೂಂದಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ನೇರ ಸಂದರ್ಶನದಲ್ಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಮೆಡ್‍ಪ್ಲಸ್‍ದಲ್ಲಿ ಫಾರ್ಮಾಸಿಸ್ಟ್ ಹುದ್ದೆಗೆ ಡಿ/ಬಿ ಫಾರ್ಮಾ ವಿಥ್ ಪಿಸಿಐ ವಿದ್ಯಾರ್ಹತೆ ಹೊಂದಿರಬೇಕು. ಫಾರ್ಮಾಸಿ ಎಡ್ ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಸಿ.ಎಸ್.ಎ. ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಗುರು ದಿಕ್ಷಾ ಅಕಾಡೆಮಿಯಲ್ಲಿ ಶಿಕ್ಷಕ, ಆಪ್ತ ಸಮಾಲೋಚಕ, ಮಾರ್ಕೆಟಿಂಗ್ ಎಕ್ಸಿಕ್ಯೊಟಿವ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಫೀಸ್ ಬಾಯ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು.

ಲಾಹೋಟಿ ಮೋಟಾರ್ಸ್‍ದಲ್ಲಿ ರಿಲೇಷನ್‍ಶಿಫ್ ಮ್ಯಾನೇಜರ್ ಹಾಗೂ ರಿಷೇಪ್ಶನಿಸ್ಟ್/ ಶೋರೂಮ್ ಹೊಸ್ಟೆಸ್ಸ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.

ಎಸ್.ಡಿ.ಡಿ.ಓ.ಎಮ್ ಚಿಟ್ ಫಂಡ್ ಪ್ರೈ.ಲೀ.ದಲ್ಲಿ ಏಜೆಂಟ್ ಹುದ್ದೆಗೆ ಎಸ್.ಎಸ್.ಎಲ್.ಸಿ/ ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು.

 

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನೇರÀ ಸಂರ್ದಶನದಲ್ಲಿ ಭಾಗವಹಿಸುವರು. ನೇರÀ ಸಂರ್ದಶನದಲ್ಲಿಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...