ಕಲಬುರಗಿ: ಬಳ್ಳಾರಿ ಜಿಲ್ಲಾ ಸಹಾಯಕ ಆಯುಕ್ತರು ಶ್ರೀರಾಮ ಸೇನೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮಿಗಳಿಗೆ ಒಂದು ವಾರಗಳವರೆಗೆ ಬಳ್ಳಾರಿ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಹಿಂದು ಮಹಾಗಣಪತಿ ಧರ್ಮ ಸಭೆಯಲ್ಲಿ ಭಾಗಿಯಾಗುವಂತೆ ಸಿದ್ದಲಿಂಗ ಸ್ವಾಮಿ ಅವರಿಗೆ ಆಹ್ವಾನ ಬಂದ ಹಿನ್ನೆಲೆಯಲ್ಲಿ, ಬಳ್ಳಾರಿಗೆ ಹೊರಟಿದ್ದು,ಧರ್ಮ ಸಭೆಯಲ್ಲಿ ಭಾಗಿಯಾಗದಂತೆ ತಡೆಯಲು ಬಳ್ಳಾರಿ ಪ್ರವೇಶ ನಿರ್ಬಂಧ ಹೇರಿದ ಆದೇಶ ಪ್ರತಿ ಪೊಲೀಸ್ ಅಧಿಕಾರಿಗಳು ಸ್ವಾಮಿಗೆ ನೀಡಿ ಮಾಹಿತಿ ನೀಡಿದ್ದರು.


