ಕಲಬುರಗಿ | ಮೂಲಭೂತ ಸೌಕರ್ಯಕ್ಕಾಗಿ ಪಾಲಿಕೆ ಆಯುಕ್ತರಿಗೆ ಮನವಿ

Date:

Share post:

ಕಲಬುರಗಿ : ನಗರದ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈಗಾಗಲೇ ಪಾಲಿಕೆಯಿಂದ ನೀಡಿರುವ ಸ್ಥಳದ ಮೇಲೆ ವ್ಯಾಪಾರ ಮಾಡಲು 2014 ಮತ್ತು 2019 ರ ಕಾಯ್ದೆಯನ್ವಯ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಅಖಿಲ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಈಗಾಗಲೇ ಹಳೆ ಜೇಲ್ ಚೌಪಾಟಿ ಸೂಪರ ಮಾರ್ಕೆಟ್ ಜಾಗದಲ್ಲಿ ಬೀದಿ ಬದಿಯಲ್ಲಿ ಕುಳಿತುಕೊಂಡು ಸರಾಫ್ ಬಜಾರ, ಕಿರಾಣಾ ಬಜಾರ, ಚಪ್ಪಲ ಬಜಾರ, ಕಪಡಾ ಬಜಾರ, ಜನತಾ ಬಜಾರ, ದತ್ತ ಮಂದಿರ, ಸಿಟಿ ಬಸ್ ನಿಲ್ದಾಣ ಸೇರಿದಂತೆ ಕಲಬುರಗಿ ನಗರದಾದ್ಯಂತ ರಸ್ತೆ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ 2014 ಮತ್ತು 2019 ರ ಕಾಯ್ದೆಯನ್ವಯ ದಿನಾಂಕ: 02.08.2017 ರಂದು ಅಂದಿನ ನಗರಾಭಿವೃದ್ಧಿ ಸಚಿವರಾದ ಸನ್ಮಾನ್ಯ ಶ್ರೀ ರೋಷನ್ ಬೇಗ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶರಣಪ್ರಕಾಶ ಪಾಟೀಲ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಪಿ.ಸುನೀಲ ಕುಮಾರ ರವರು ಮತ್ತು ಅಧಿಕಾರಿ ವರ್ಗದವರು ಹಳೆ ಜೇಲ್ ಚೌಪಾಟಿ ಸ್ಥಳವನ್ನು ಪರಿಶೀಲಿಸಿ ಈ ಸ್ಥಳದಲ್ಲಿ ಬೀದಿ ಬದಿಯಲ್ಲಿ ಕುಳಿತುಕೊಂಡು ಸೂಪರ ಮಾರ್ಕೆಟ್ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರನ್ನು ಈ ಸ್ಥಳದಲ್ಲಿ ವ್ಯಾಪಾರ ಮಾಡಲು ಮತ್ತು ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೌಕರ್ಯಗಳನ್ನು ಒದಗಿಸಬೇಕೆಂದು ನಗರಾಭಿವೃದ್ಧಿ ಸಚಿವರು ಪಾಲಿಕೆಯ ಆಯುಕ್ತರಾದ ಪಿ.ಸುನೀಲ ಕುಮಾರ ರವರಿಗೆ ನಿರ್ದೇಶನ ನೀಡಿದ್ದರು. ಆದರೆ 2017 ರಿಂದ ಇಲ್ಲಿಯವರೆಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳು ಕೂಡ ಒದಗಿಸಿಲ್ಲ ಎಂದು ದೂರಿದರು.

ಅಲ್ಲದೆ ಪಾಲಿಕೆಯ ವಲಯ-1, 2 ಮತ್ತು 3 ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಐ.ಟಿ.ಐ. ಕಾಲೇಜು ಎದುರುಗಡೆ, ಎಂ.ಎಸ್.ಕೆ.ಮಿಲ್ ರಸ್ತೆ ಕಲಬುರಗಿ, ಡಂಕಾ ವೃತ್ತದಿಂದ ಪಾಕಿಜಾ ವೈನ್ ಶಾಪ್ ವರೆಗೆ, ಕೆ.ಎಂ.ಎಫ್. ಡೈರಿ ಎದುರುಗಡೆ, ಆಣಕಲ್ ಪೆಟ್ರೋಲ್ ಬಂಕ್ ಎದುರುಗಡೆ, ಅಂಡರಬ್ರಿಜ್ ಪಂಚಶೀಲ ನಗರ, ಆಳಂದ ಚೆಕ್ ಪೆÇಸ್ಟ, ಸೂಪರ ಮಾರ್ಕೆಟ್, ಕಲಬುರಗಿ ಈ ಏಳು ಪ್ರದೇಶಗಳಲ್ಲಿ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರನ್ನು ಈ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವ್ಯಾಪಾರ ಮಾಡಲು ವ್ಯವಸ್ಥೆಗಳನ್ನು ಮಾಡಿಕೊಡುತ್ತೇವೆ ಎಂದು ದಿನಾಂಕ: 25.04.2015 ರಂದು ಅಂದಿನ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಎಸ್.ಬಿ.ಕಟ್ಟಿಮನಿಯವರು ಈಗಾಗಲೇ ನಿರ್ದೇಶನವನ್ನು ನೀಡಿದ್ದರು. ಆದರೆ, ಇಲ್ಲಿಯವರೆಗೆ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರನ್ನು ಏಳು ಪ್ರದೇಶಗಳಲ್ಲಿ ಸ್ಥಳ ನಿಗದಿ ಮಾಡಿರುವುದಿಲ್ಲ, ಕುಡಿಯುವ ನೀರು, ವಿದ್ಯುತ್, ಶೌಚಾಲಯ ಯಾವುದೇ-ಸೌಲಭ್ಯಗಳು ನೀಡದೇ ಕಲಬುರಗಿ ನಗರದಲ್ಲಿ ಜನರು ಓಡಾಡಲು, ನಡೆದಾಡಲು, ಈ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಂದ ವಾಹನ ಸವಾರರಿಗೆ ಮತ್ತು ಜನಸಾಮಾನ್ಯರಿಗೆ ತುಂಬಾ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಅಲ್ಲದೆ ದಸರಾ, ದೀಪಾವಳಿ, ಗಣೇಶ ಚತುರ್ಥಿ, ರಮ್‍ಜಾನ್ ಈ ಧಾರ್ಮಿಕ ಹಬ್ಬಗಳಲ್ಲಿ ಸಾರ್ವಜನಿಕರು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಅಥವಾ ಇನ್ನಿತರ ವಸ್ತುಗಳ ಖರೀದಿಗೆ ಆಗಮಿಸಿದ ಸಂದರ್ಭಗಳಲ್ಲಿ ಮೊಬೈಲ್ ಕಳ್ಳತನ, ಕಳ್ಳತನ, ಧರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ತಾವುಗಳು ಹಾಗೂ ಪೆÇಲೀಸ ಆಯುಕ್ತರು, ಸಂಚಾರಿ ಪೆÇಲೀಸರು ಈಗಾಗಲೇ ತಮ್ಮ ಇಲಾಖೆಯಿಂದ ಗುರುತಿಸಿರುವ ಏಳೂ ಸ್ಥಳಗಳಲ್ಲಿ ವ್ಯಾಪಾರ ಮಾಡಲು ಅನುಕೂಲಗಳನ್ನು, ವ್ಯವಸ್ಥೆಗಳನ್ನು ಮಾಡಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ರಾಜ್ಯಾದ್ಯಕ್ಷ ಜಗನ್ನಾಥ ಸೂರ್ಯವಂಶಿ, ನ್ಯಾಯವಾದಿ ಗುರುರಾಜ ತಿಳಗುಳ, ವೀರಣ್ಣ ಪಟ್ಟೇದಾರ, ಚಂದ್ರಶೇಖರ ಪಾಟೀಲ, ಚಂದ್ರಹಾಸ ಜಿತ್ರೆ, ಅಶೋಕ ರೆಡ್ಡಿ, ಹನುಮಂತ ಹೈದ್ರಾ, ಬಾಬು ಪರೀಟ, ವೆಂಕಟೇಶ ಕಾಂಬಳೆ, ವಿಕ್ರಂ ಪವಾರ, ಕನ್ನಡ ಪರ ಹೋರಾಟಗಾರರಾದ ಸಚಿನ ಪರತಾಬಾದ, ದತ್ತು ಭಾಸಗಿ, ವೆಂಕಟೇಶ ಎಸ್.ಬಿ, ಉದಯ ಮುನಗಲ್ಲ, ಜಗತಸಿಂಗ, ಸವಿತಾ ಜಿಂಗಾಡೆ, ಶ್ರೀದೇವಿ ಕೋರೆ, ಸಂತೋಷಮ್ಮ, ಮಾಣಿಕ ಪವಾರ, ನವೀನ ತೇಲ್ಕರ, ನರಸಿಂಗ ಪೀಸೆ, ಸುಭಾಷ ಡರ್ಬಿ, ಮಲ್ಲಿಕಾರ್ಜುನ ಭಾಗೋಡಿ ಸೇರಿದಂತೆ ಇನ್ನಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...