ಕಲಬುರಗಿ| ಭಾಗ್ಯವಂತಿ ದೇವಾಲಯ ಹುಂಡಿ ಎಣಿಕೆ: 550 ಗ್ರಾಂ ಚಿನ್ನಾಭರಣ, 5 ಕೆ.ಜಿ ಬೆಳ್ಳಿ, 70 ಲಕ್ಷ ರೂ. ನಗದು ಸಂಗ್ರಹ

Date:

Share post:

ಕಲಬುರಗಿ: ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳವಾಗಿರುವ ಅಫಜಲಪೂರ ತಾಲೂಕಿನ ಸುಕ್ಷೇತ್ರ ಘತ್ತರಗಾದ ಶ್ರೀ ಭಾಗ್ಯವಂತಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ಬುಧವಾರ ನಡೆದಿದ್ದು, 550 ಗ್ರಾಂ ಚಿನ್ನಾಭರಣ, 5 ಕೆ.ಜಿ. ಬೆಳ್ಳಿ ಹಾಗೂ 70 ಲಕ್ಷ ರೂ. ಕ್ಕಿಂತ ಅಧಿಕ ನಗದು ಸಂಗ್ರಹವಾಗಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ಕುದರಿ ತಿಳಿಸಿದ್ದಾರೆ.

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮುಂದಾಳತ್ವದಲ್ಲಿ ಪೊಲೀಸ್ ಮತ್ತು ತಹಸೀಲ್ದಾರ್ ಕಚೇರಿಯ ಸಿಬ್ಬಂದಿಗಳ ಸಮ್ಮುಖದಲ್ಲಿ ಒಟ್ಟು 11 ಹುಂಡಿಗಳ ಪೈಕಿ 9 ಹುಂಡಿಗಳನ್ನು ತೆರೆದು ಎಣಿಕೆ ಮಾಡಲಾಯಿತು. ದೇವಾಲಯದ ಸಿಬ್ಬಂದಿ ಒಳಗೊಂಡಂತೆ ತಾಲೂಕಿನ 70 ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆಯ 50ಕ್ಕೂ ಅಧಿಕ ಸಿಬ್ಬಂದಿ ಮತ್ತು ಎಸ್‌ಬಿಐ ಬ್ಯಾಂಕಿನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಮುಂಜಾನೆ 11ರ ನಂತರ ಆರಂಭಗೊಂಡ ಎಣಿಕೆ ಕಾರ್ಯ ಸಂಜೆ 7.30 ಗಂಟೆ ವರೆಗೆ ನಡೆಯಿತು.

ಉಪ ತಹಸೀಲ್ದಾರರು ಚೆನ್ನಬಸಪ್ಪ, ಕಂದಾಯ ನಿರೀಕ್ಷಕ ಅಶೋಕ, ಅಫಜಲಪುರ ಪೊಲೀಸ್ ಠಾಣೆಯ ಎ.ಎಸ್.ಐ ಅಂಬಾರಾಯ, ಮುಖ್ಯ ಪೇದೆ ಶಿವಪ್ಪ, ದೇವಾಲಯದ ಮಂಜುನಾಥ ನಾವಿ ಸೇರಿದಂತೆ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...