ಕಲಬುರಗಿ| ರಾಷ್ಟ್ರಪತಿಗಳಿಂದ ರಾಷ್ಟ್ರೀಯ ಶಿಕ್ಷಕಿ ಪ್ರಶಸ್ತಿ ಸ್ವೀಕರಿಸಿದ ಡಾ. ಶ್ರೀದೇವಿ ಕಲ್ಯಾಣ್

Date:

Share post:

ಕಲಬುರಗಿ: ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ, ಉನ್ನತ ಶಿಕ್ಷಣ ಇಲಾಖೆಯು ನೀಡುವ 2025ರ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಲಬುರಗಿಯಿಂದ ಆಯ್ಕೆಯಾಗಿರುವ ಡಾ. ಶ್ರೀದೇವಿ ಕಲ್ಯಾಣ್ ಅವರಿಗೆ ಪ್ರದಾನ ಮಾಡಿದರು.

ಸದ್ಯ ನಗರದ ಶರಣಬಸವ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದಲ್ಲಿ ಗಣಿತಶಾಸ್ತ್ರದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅವರು 2025ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕಿಯಾಗಿ ಆಯ್ಕೆಯಾಗಿದ್ದರು. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ ಅವರಿಗೆ 50,000 ರೂ. ನಗದು ಮತ್ತು ಬೆಳ್ಳಿ ಪದಕವನ್ನು ಹೊಂದಿರುವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಈ ವೇಳೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು.

ಕರ್ನಾಟಕದಿಂದ ಶ್ರೀದೇವಿ ಸೇರಿದಂತೆ ಉಡುಪಿಯ ಮಣಿಪಾಲ ತಂತ್ರಜ್ಞಾನ ಸಂಸ್ಥೆಯ ಡಾ. ಶೋಭಾ ಎಂ. ಇ. ಮತ್ತು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನ ಪ್ರೊ. ಶ್ರೀವರ್ಧಿನಿ ಕೇಶವಮೂರ್ತಿ ಝಾ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...