ಕಲಬುರಗಿ: ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಪ್ರತಿಷ್ಠಾಪನೆಗೊಂಡ ಗಣೇಶ ವಿಗ್ರಹಗಳ (11ನೇ ದಿವಸದ) ವಿಸರ್ಜನೆಯು ಸೆಪ್ಟೆಂಬರ್ 6 ರಂದು ಶನಿವಾರ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ 2025ರ ಸೆಪ್ಟೆಂಬರ್ 6ರ ಬೆಳಗಿನ 6 ಗಂಟೆಯಿಂದ ಸೆಪ್ಟೆಂಬರ್ 7ರ ಬೆಳಗಿನ 6 ಗಂಟೆಯವರೆಗೆ ಎಲ್ಲಾ ತರಹದ ಮದ್ಯ ಮಾರಾಟವನ್ನು ನಿಷೇಧಿಸಿ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮಾರಾಟವನ್ನು ನಿಷೇಧಿಸಿ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ. ಈ ಹಬ್ಬದ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


