ಕಲಬುರಗಿ: ಲಾರಿಯೊಂದಕ್ಕೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಸಿಲುಕಿ ಚಾಲಕನಿಗೆ ಗಂಭೀರ ಗಾಯಗೊಂಡಿರುವ ಘಟನೆ ಜೇವರ್ಗಿ ಪಟ್ಟಣದ ಬೈಪಾಸ್ ನಲ್ಲಿ ನಡೆದಿದೆ.
ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಡ್ರೈವರ್ ಲಾರಿಯಡಿ ಸಿಲುಕಿ ನರಳಾಡುತ್ತಿದ್ದ ಎನ್ನಲಾಗಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಂಭೀರ ಗಾಯಗೊಂಡಿದ್ದ ಡ್ರೈವರ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


