ಕಲಬುರಗಿ| ಡಾ.ಶರಣಬಸವಪ್ಪ ಅಪ್ಪ ವಿಧಿವಶ; ಕುಟುಂಬಕ್ಕೆ ಭೇಟಿ ನೀಡಿ, ಮಲ್ಲಿಕಾರ್ಜುನ ಖರ್ಗೆ ಸಾಂತ್ವನ

Date:

Share post:

ಕಲಬುರಗಿ: ಇತ್ತೀಚಿಗೆ ಲಿಂಗೈಕ್ಯರಾದ ಶರಣಬಸವೇಶ್ವರ ಸಂಸ್ಥಾನದ 8ನೆಯ ಪೀಠಾಧಿಪತಿಗಳಾಗಿದ್ದ ಡಾ.ಪೂಜ್ಯ ಶ್ರೀ ಶರಣಬಸವಪ್ಪ ಅಪ್ಪಾಜೀ‌ ಅವರ ಕುಟುಂಬ ವರ್ಗದವನ್ನು ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆ ವಿರೋಧ ಪಕ್ಷದ ‌ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.

 

ಡಾ. ಅಪ್ಪಾಜೀ ಅವರ ಶೈಕ್ಷಣಿಕ ಕ್ಷೇತ್ರದ ಕೊಡುಗೆಯನ್ನು ಸ್ಮರಿಸಿದ ಖರ್ಗೆ ಅವರು, ಹೈದರಾಬಾದ್ ಕರ್ನಾಟಕದದಂತ ಹಿಂದುಳಿದ ಪ್ರದೇಶದಲ್ಲಿ ಅಕ್ಷರ ಕ್ರಾಂತಿಯ ಜೊತೆಗೆ ಶ್ರೀ ಸಂಸ್ಥಾನದ ಮಹತ್ತರ ಕೊಡುಗೆಯಾದ ದಾಸೋಹವನ್ನು ದಶಕಗಳ ಕಾಲ ಮುಂದುವರೆಸಿಕೊಂಡು ಬಂದಿದ್ದರು ಎಂದು ಸ್ಮರಿಸಿದರು.

ಡಾ‌.ಅಪ್ಪಾಜೀ ಅವರ ಸುಪುತ್ರ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ತಮ್ಮ ಪಕ್ಕದಲ್ಲಿ ಕುಳ್ಳಿರಿಸಿಕೊಂಡು ಆತ್ಮೀಯವಾಗಿ ಮಾತನಾಡಿಸಿದರು.

ಈ ಸಂದರ್ಭದಲ್ಲಿ ಸಂಸ್ಥಾನದ ನೂತನ ಅಧ್ಯಕ್ಷರಾದ ದಾಕ್ಷಾಯಿಣಿ ಅವ್ವಾಜೀ, ರಾಧಾಬಾಯಿ ಖರ್ಗೆ, ಸಚಿವ ಶರಣಬಸಪ್ಪ ದರ್ಶನಾಪುರ ಸೇರಿದಂತೆ ಹಲವರಿದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...