ಕಲಬುರಗಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ನವೋದ್ಯಮ ಪ್ರಾರಂಭಿಸಲು (Start Up) ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಭೌದ್ಧ, ಸಿಖ್ಖ ಹಾಗೂ ಪಾರ್ಸಿ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳು eitbt.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2025ರ ಸೆಪ್ಟೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22231007 ಅಥವಾ ಇ-ಮೇಲ್ elevate-ktech@ka.gov.in ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.


