ಕಲಬುರಗಿ| ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ; 24 ಗಂಟೆಗಳಲ್ಲೇ ಆರೋಪಿಯ ಬಂಧನ

Date:

Share post:

ಕಲಬುರಗಿ: ಸಬ್ ಅರ್ಬನ್ ಪೊಲೀಸ್ ಠಾಣೆಯ ವ್ಯಾಪ್ತಿಯ ಮಿಲ್ಲತ್ ನಗರದಲ್ಲಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಕೇವಲ 24 ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಲ್ಲಿನ ಇಸ್ಲಾಮಾಬಾದ ಕಾಲೋನಿ ನಿವಾಸಿ ಸಮೀರ್ ಅಲಿಯಾಸ್ ಟಮಾಟ ಸಮೀರ್ ನಬಿಸಾಬ ಮುಲ್ಲಾ (25) ಬಂಧಿತ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ ಸಮೀರ್, ಶನಿವಾರ ರಾತ್ರಿ ಮಾಲಗತ್ತಿ ಕ್ರಾಸ್ ಅರಾಫತ್ ಕಾಲೋನಿಯ ನಿವಾಸಿ ಎಂ.ಡಿ ಬಿಲಾಲ್ ಅಲಿಯಾಸ್ ಸುರೇಶ್ ರೆಡ್ಡಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾಯಿಯಾಗಿದ್ದ ಎನ್ನಲಾಗಿದೆ. ಕೂಡಲೇ ಆರೋಪಿಯ ಬಂಧನಕ್ಕೆ ನಗರ ಪೊಲೀಸರು ಬಲೆ ಬೀಸಿದ್ದರು. ಕ್ಷಿಪ್ರ ಕಾರ್ಯಾಚರಣೆ ಮೂಲಕ ಆರೋಪಿಯನ್ನು ಕೇವಲ 24 ಗಂಟೆಯಲ್ಲೇ ವಶಕ್ಕೆ ಪಡೆದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ ಅವರು ಶ್ಲಾಘಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...