ಕಲಬುರಗಿ| ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

 

ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2025ರ ಅಕ್ಟೋಬರ್ 4 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ https://bcwd.karnataka.gov.in/ ವೆಬ್‍ಸೈಟ್, ಸಹಾಯವಾಣಿ 8050770004 ಮತ್ತು 8050770005, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ವಿಳಾಸವನ್ನು ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...