ಕಲಬುರಗಿ| ಬೆಳ್ಳಂ ಬೆಳಗ್ಗೆ ಸೇಡಂ ಪಟ್ಟಣದಲ್ಲಿ ಕೊಲೆ; ಆರೋಪಿ ವಶಕ್ಕೆ

Date:

Share post:

ಕಲಬುರಗಿ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೇಡಂ ಪಟ್ಟಣದ ಉಡಗಿ ಕಮಾನ್ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಲಾರಿ ಮಾಲಿಕ ಎನ್ನಲಾಗುತ್ತಿರುವ ಸೇಡಂ ಪಟ್ಟಣದ ನಿವಾಸಿ ಶೇಖ್ ರಿಯಾಜ್ (45) ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ.

ಮೃತ ರಿಯಾಜ್ ಎಂಬಾತನು ಎರಡು ಮದುವೆಯಾಗಿದ್ದು, ತನ್ನ ಎರಡನೆಯ ಹೆಂಡತಿಯ ಜೊತೆಗೆ ಕೊಲೆ ಮಾಡಿರುವ ಆರೋಪಿ ಅನೈತಿಕವಾಗಿ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಲಾರಿ ಚಾಲಕ ರಿಯಾಜ್, ವಾಸವಧತ್ತಾ ಸಿಮೆಂಟ್ ಕಾರ್ಖಾನೆಯಿಂದ ಮನೆಗೆ ತೆರಳುವ ಸಮಯದಲ್ಲಿ ಜಗಳವಾಗಿ ಕೊನೆಗೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ.

ಕೊಲೆಯಾದ ವ್ಯಕ್ತಿಯ ಮೃತದೇಹವನ್ನು ಶವ ಪರೀಕ್ಷೆಗೆ ರವಾನಿಸಲಾಗಿದ್ದು, ವಶಕ್ಕೆ ಪಡೆದ ಆರೋಪಿಯನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಸೇಡಂ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...