ಕಲಬುರಗಿ| ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ: ಡಾ.ಮೇಘಾ ಖಂಡೇಲವಾಲ 

Date:

Share post:

ಕಲಬುರಗಿ: ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದರು. ಪೋರ್ಚುಗೀಸರಿಗೆ ಸಿಂಹಸ್ವಪ್ನವಾಗಿದ್ದ ಉಲ್ಲಾಳದ ರಾಣಿ ಅಬ್ಬಕ್ಕ ಜೀವನ, ಶೌರ್ಯ, ಸಾಹಸ ಇಂದಿನ ಮಹಿಳೆಯರಿಗೆ ಸ್ಫೂರ್ತಿ. ಅಬ್ಬಕ್ಕಳ ಸ್ವಾಭಿಮಾನ, ಧೈರ್ಯ ಇಂದಿನ ಮಹಿಳೆಯರಲ್ಲಿ ಇರಬೇಕು ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಗಣಿತ ವಿಭಾಗದ ಮುಖ್ಯಸ್ಥರಾದ ಡಾm ಮೇಘಾ ಖಂಡೇಲವಾಲ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಹಿಳಾ ಯೋಧರು ರಾಣಿ ಅಬ್ಬಕ್ಕ ಚೌತ್, ಕಿತ್ತೂರು ರಾಣಿ ಚನ್ನಮ್ಮ ಮತ್ತು ಲೋಕಮಾತೆ ಅಹಲ್ಯೆ ಬಾಯಿ ಹೋಳ್ಕರ್ ಜೀವನ ಕುರಿತು ಒಂದು ದಿನದ ವಿಚಾರ ಸಂಕಿರಣದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡುತ್ತಿದ್ದರು.

ರಾಣಿ ಅಬ್ಬಕ್ಕ ಕೆಚ್ಚೆದೆಯ ಹೋರಾಟದಿಂದ ಉಲ್ಲಾಳಕ್ಕೆ ಜಯ ದೊರೆತಿತ್ತು. ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಮಹಿಳೆಯರಿಗೆ ಅಧಿಕಾರ, ಗೌರವ ನೀಡಲಾಗುತ್ತಿದೆ. ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚನ್ನಮ್ಮ, ಅಹಲ್ಯೆ ಬೋಯಿ ಹೋಳ್ಕರ್,ಒನಕೆ ಓಬವ್ವ ಅವರಂತಹ ಶಕ್ತಿಶಾಲಿ ಮಹಿಳೆಯರು ಅದಕ್ಕೆ ಸಾಕ್ಷಿ ಎಂದು ಹೇಳಿದರು.

ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಮಹಿಳಾ ಕೋಶದ ಸಂಚಾಲಕಿ ಡಾ ಮೈತ್ರಾದೇವಿ ಹಳೆಮನಿ ಮಾತನಾಡಿ ರಾಣಿ ಅಬ್ಬಕ್ಕ,ಕಿತ್ತೂರು ಚೆನ್ನಮ್ಮ , ಅಹಲ್ಯೆ ಬಾಯಿ ಹೋಳ್ಕರ್ ಇವರು ಕೇವಲ ರಾಣಿಯರು ಮಾತ್ರ ಅಲ್ಲ ಇತಿಹಾಸ ಬದಲಿಸಿದ ವೀರನಾರಿಯರು. ಅವರ ಜೀವನ ಸಾಧನೆ ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ತಿಳಿಸಬೇಕಾಗಿದೆ ಈ ದಿಶೆಯಲ್ಲಿ ಸರ್ಕಾರಗಳು ಪಠ್ಯ ಪುಸ್ತಕಗಳಲ್ಲಿ ಇವರ ನೈಜ ಜೀವನ ಚರಿತ್ರೆಗಳನ್ನು ತಿಳಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶಿಲ್ಪಾ ಅಲ್ಲದ, ರಾಜಶೇಖರ ಬೀರನಳ್ಳಿ, ಡಾ ನೀಲಕಂಠ ವಾಲಿ ಉಪಸ್ಥಿತರಿದ್ದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಲ್ಲಪ್ಪ ಬೋತಗಿ ವಹಿಸಿದ್ದರು.ರಾಷ್ಟೀಯ ಸೇವಾ ಯೋಜನೆ ಅಧಿಕಾರಿ ಡಾ ಪ್ರಾಣೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...