ಕಲಬುರಗಿ| ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ; ಹೆಮ್ಮೆಯ ಸಂಗತಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ: ಸಾರ್ವಜನಿಕರ ಸೇವೆ, ನಾಗರಿಕ ಸ್ನೇಹಿ, ವೃತ್ತಿಪರತೆ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಪೊಲೀಸ್ ಕಮೀಷನರೇಟ್ ಅಮೂಲಾಗ್ರ ಸುಧಾರಣೆ ಹೊಂದಿದೆ. ಎಲ್ಲಾ ಮಾನದಂಡಗಳನ್ನು ಪರಿಗಣಿಸಿ. ಹಾಗಾಗಿ ಅಂತರಾಷ್ಟ್ರೀಯ ISO 9001 2015 ಪ್ರಶಸ್ತಿ ಲಭಿಸಿದೆ. ಇದು ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಪ್ರತಿಯೊಬ್ಬ ಸಿಬ್ಬಂದಿ ಕಾರಣರಾಗಿದ್ದಾರೆ. ಅವರೆಲ್ಲರಿಗೂ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ರವಿವಾರ ಬೆಳಗ್ಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡುತ್ತಿದ್ದರು.

ಈಗ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸಿಕ್ಕಿದೆ. ಆದರೆ ಜನರಿಂದ ಹೊಗಳಿಗೆಯ ಪ್ರಶಸ್ತಿ ಪಡೆಯುವಲ್ಲಿ ಪೊಲೀಸರು ಮತ್ತಷ್ಟು ಜನಸ್ನೇಹಿ ಆದಾಗ ಮಾತ್ರ ಜನರ ಸರ್ಟಿಫಿಕೇಟ್ ಸಿಗಲಿದೆ. ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಪೊಲೀಸರಿಗೆ ಸಲಹೆ ನೀಡಿದರು.

ಕ್ರೈಮ್ ನಲ್ಲಿ ಸಾಕಷ್ಟು ಇಳಿಮುಖವಾಗಿದೆ. ಎಸ್ಸಿ ಎಸ್ ಟಿ ಸಂಬಂಧಿಸಿದ ಕೇಸ್ ಗಳು ಕಮ್ಮಿಯಾಗಿವೆ. ಸಾಮಾನ್ಯ ಅಪರಾಧ ಪ್ರಕರಣಗಳು ಗಣನೀಯವಾಗಿ ಕಮ್ಮಿಯಾಗಿವೆ. ಚೈನ್ ಕಳ್ಳತನ ಗಳೂ ಕೂಡಾ ಕಡಿಮೆಯಾಗಿವೆ ಎಂದ ಸಚಿವರು ಡ್ರಗ್ಸ್ ಗೆ ಸಂಬಂಧಿಸಿದಂತೆ ಕೇಸ್ ಗಳು ಏರಿವೆ. ಡಗ್ಸ್ ಹಾಗೂ ಮಾದಕ ಪದಾರ್ಥಗಳ ಮಾರಾಟ ಚಟುವಟಿಕೆಯ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರಿಂದ ಡ್ರಗ್ಸ್ ಗೆ ಸಂಬಂಧಿಸಿದ ಕೇಸ್ ಗಳು ಹೆಚ್ಚಳವಾಗಿವೆ. ಡ್ರಗ್ಸ್ ವಿರುದ್ದದ‌ ಮತ್ತಷ್ಟು ಕಠಿಣ ಕ್ರಮವಹಿಸಬೇಕಾಗಿದೆ ಎಂದರು.

ಸಕಾಲದಲ್ಲಿ ರಾಜ್ಯಕ್ಕೆ ಕಲಬುರಗಿ ಮೊದಲ ಸ್ಥಾನ, ಜಿಪಂ ನಲ್ಲಿ ತೆರಿಗೆ ವಸೂಲಾತಿಯಲ್ಲಿ ಕಲಬುರಗಿ ಜಿಲ್ಲೆ 13 ನೇ ಸ್ಥಾನ ಪಡೆದಿದೆ. ಈಗ ಪೊಲೀಸ್ ಕಮಿಷನರೇಟ್ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿರುವುದು ಅತ್ಯಂತ ಖಷಿಯ ವಿಚಾರವಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಮಾತನಾಡಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಕಲಬುರಗಿ ಪೊಲೀಸ್ ಕಮೀಷನರೇಟ್ ತನ್ನ ಅಮೂಲಾಗ್ರ ಬದಲಾವಣೆ, ಸಾರ್ವಜನಿಕರ ಸೇವೆ ವಿಸ್ತರಣೆ ಹಾಗೂ ಇತರೆ ವಿಭಾಗಗಳಲ್ಲಿ ಸುಧಾರಣೆ ತಂದಿರುವುದಕ್ಕೆ ಈ ಪ್ರಶಸ್ತಿ ಲಭಿಸಿದೆ. ಇದಕ್ಕೆ ಕಾರಣೀಕರ್ತರಾದ ಎಲ್ಲರಿಗೂ ಅಭಿನಂದನೆಗಳು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪೊಲೀಸ್ ಕಮೀಷನರ್ ಡಾ.ಶರಣಪ್ಪ ಢಗೆ ಮಾತನಾಡಿ,
ಸಾರ್ವಜನಿಕರ ಸೇವೆಗಳಲ್ಲಿ ಹಾಗೂ ಇತರೆ ವಿಭಾಗಗಳಲ್ಲಿ ಸುಧಾರಣೆ ತಂದ ಹಿನ್ನೆಲೆಯಲ್ಲಿ ಐ ಎಸ್ ಓ -9001 2021 ಪ್ರಶಸ್ತಿಯನ್ನು ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಗೆ ನೀಡಲಾಗಿದೆ.

“ಸಾರ್ವಜನಿಕರ ಫೈಲ್ ಗಳು‌ ತ್ವರಿತವಾಗಿ ವಿಲೇವಾರಿಯಾಗುತ್ತಿವೆ. ಸಿಬ್ಬಂದಿಗಳ ರಜೆ,‌ ವೈದ್ಯಕೀಯ ಸೇವೆ, ವಿವಿಧ ವಿಭಾಗಗಳಲ್ಲಿ ಗಣನೀಯ ಬದಲಾವಣೆಯಾಗಿವೆ. ಕಮೀಷನರೇಟ್ ಅಡಿಯಲದಲ್ಲಿನ ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲಾಗಿದೆ. ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದಲ್ಲಿ ಗಣನೀಯ ಸುಧಾರಣೆ ಹಾಗೂ. ಸಾರ್ವಜನಿಕ ಸೇವೆ ಮುಖ್ಯವಾಗಿ ಪಾಸ್ ಪೋರ್ಸ್ ವೆರಿಫಿಕೇಷನ್ ನಲ್ಲಿ ಸುಧಾರಣೆ ತರಲಾಗಿದೆ. ಒಂದು ವಾರದ ಒಳಗಾಗಿ ವಿಲೇವಾರಿ ಮಾಡಲು‌ ಕ್ರಮವಹಿಸಲಾಗಿದೆ” ಎಂದು ಡಾ. ಶರಣಪ್ಪ ಢಗೆ ವಿವರಿಸಿದರು.

ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂ‌ಎಲ್ ಸಿ ತಿಪ್ಪಣ್ಣಪ್ಪ‌ ಕಮಕನೂರು, ಜಗದೇವ ಗುತ್ತೇದಾರ್, ಕುಡಾ ಅಧ್ಯಕ್ಷ ಮಜರ್ ಅಲಂ‌ಖಾನ್, ಜೆಸ್ಕಾಂ‌ ಅಧ್ಯಕ್ಷ ಪ್ರವೀಣ್ ಹರವಾಳ್, ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್, ಕಮೀಷನರ್ ಡಾ.ಶರಣಪ್ಪ ಢಗೆ, ಸಿಇಓ ಭಂವರ್ ಸಿಂಗ್ ಮೀನಾ, ಎಸ್ ಪಿ ಅಡ್ಡೂರು ಶ್ರೀನಿವಾಸಲು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...