ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

Date:

Share post:

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ ಕೆ. ಹೆಚ್. ಬಿ. ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ರಾತ್ರಿ ದೇಶ ಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಯಿತು.

ಮಕ್ಕಳಿಗಾಗಿ ದೇಶ ಭಕ್ತಿಗೀತೆ, ನೃತ್ಯ, ಗಾಯನ ಸ್ಪರ್ಧೆ ಗಳನ್ನ ಏರ್ಪಡಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ದೇಶ ಸೇವೆ ಮಾಡಿ ನಿವೃತ್ತರಾದ ಸೈನಿಕರಿಗೆ, ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕ-ಶಿಕ್ಷಕಿ ಯರಿಗೆ ಮತ್ತು ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ನೌಕರರಿಗೆ ಸನ್ಮಾನಿಸಲಾಯಿತು.

ಕೆ. ಹೆಚ್. ಬಿ. ನಿವಾಸಿಗಳ ಕ್ಷೇಮ ಅಭಿವೃದ್ಧಿ ಸಂಘದ ಅಧ್ಯಕ್ಷ ಸಂಜು ಶೆಟ್ಟಿ ಮಾತಾಡಿ, ಕಾಲೋನಿಯ ಸ್ವಚ್ಛತೆ ಕಾಪಾಡಬೇಕು, ಕಾಲೋನಿಯ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಸಿಗುವ ನಿಟ್ಟಿನಲ್ಲಿ ಪಾಲಕರು ಗಮನ ಹರಿಸಬೇಕು ಮತ್ತು ನಾವೆಲ್ಲ ಜಾತಿ, ಮತ, ಧರ್ಮಗಳ ಭೇದ ಭಾವ ಮರೆತು ಸಮಾಜದ ಒಳಿತಿಗಾಗಿ ಒಂದಾಗಿ ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದು ಅಭಿಪ್ರಾಯಪಟ್ಟರು.

ಕಾಲೋನಿಯ ಉಪಾಧ್ಯಕ್ಷರಾದ ಬಾಲಕೃಷ್ಣ ಕುಲಕರ್ಣಿ, ಹಣಮಂತರಾಯ, ವಿನೋದ, ಟೈಗರ್, ಸಿದ್ರಾಮಪ್ಪ, ವಿರೇಶ್ ಬೋಳಶೆಟ್ಟಿ, ಇನ್ನಿತರ ಸಂಘದ ಪದಾಧಿಕಾರಿಗಳು ಮತ್ತು ಕಾಲೋನಿಯ ನಿವಾಸಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...