ಕಲಬುರಗಿ| ಮುಟ್ಟಿನ ರಜೆ ದುಡಿಯುವ ಮಹಿಳೆಯ ಹಕ್ಕಿನ ಭಾಗ: ಕೆ.ನೀಲಾ

Date:

Share post:

ಕಲಬುರಗಿ: ದುಡಿಯುವ ಮಹಿಳೆಯರಿಗೆ ಮುಟ್ಟಿನ ರಜೆ ನೀಡಬೇಕು ಎಂದು ಸಲ್ಲಿಸಲಾದ ಅರ್ಜಿಯನ್ನು ತಳ್ಳಿಹಾಕುವ ವೇಳೆ ಭಾರತದ ಸರ್ವೋಚ್ಚ ನ್ಯಾಯಾಲಯ ವ್ಯಕ್ತಪಡಿಸಿರುವ ಕೆಲವು ಅಭಿಪ್ರಾಯಗಳು ನಕಾರಾತ್ಮಕ ಹಾಗೂ ತಾರತಮ್ಯಪೂರ್ಣವಾಗಿವೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ ಟೀಕಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿಪಿಐ(ಎಂ) ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಮುಟ್ಟಿನ ರಜೆಗೆ ಸಂಬಂಧಿಸಿದ ಕಾನೂನು ಮಾಡಲಾಗಿದೆಯಾದರೆ ಉದ್ಯೋಗದಾತರು ಮಹಿಳೆಯರನ್ನು ನೇಮಕ ಮಾಡಿಕೊಳ್ಳುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದು ವರದಿಯಾಗಿದೆ. ಇದೇ ವೇಳೆ ಅಂತಹ ರಜೆ ವ್ಯವಸ್ಥೆ ಉದ್ಯಮಗಳ ಬೆಳವಣಿಗೆಗೆ ಹಾನಿಯಾಗಬಹುದು ಎಂಬುದಾಗಿ ನ್ಯಾಯಾಲಯವು ಹೇಳಿರುವುದು ಆಶ್ಚರ್ಯಕರ ಎಂದು ಹೇಳಿದ್ದಾರೆ.

 

ನ್ಯಾಯಾಲಯದ ಈ ರೀತಿಯ ದೃಷ್ಟಿಕೋನ ಮಹಿಳೆಯರ ಜೈವಿಕ ವಾಸ್ತವಗಳನ್ನು ಅಲಕ್ಷಿಸುವ ಪಿತೃಪ್ರಧಾನ ಮನೋಭಾವವನ್ನು ಮತ್ತೊಮ್ಮೆ ಪ್ರತಿಬಿಂಬಿಸುತ್ತದೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಜೈವಿಕ ಅಗತ್ಯಗಳನ್ನು ಪರಿಗಣಿಸಬೇಕಾಗಿಲ್ಲ ಎಂಬ ತಪ್ಪು ಕಲ್ಪನೆಯನ್ನು ಇದು ಬಲಪಡಿಸುತ್ತದೆ. ಮುಟ್ಟಿನ ರಜೆಯನ್ನು ಕಂಪನಿಗಳ ಬೆಳವಣಿಗೆಗೆ ಅಪಾಯಕಾರಿ ಎಂದು ಹೇಳುವ ಮೂಲಕ ಮಹಿಳೆಯರ ಆರೋಗ್ಯದ ಅಗತ್ಯಗಳಿಗಿಂತ ಉತ್ಪಾದಕತೆಯನ್ನು ಮೇಲುಗೈ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.

ಮಹಿಳೆಯರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕಾಪಾಡಲು ಹಾಗೂ ಅವರು ಘನತೆಯಿಂದ ಕೆಲಸ ಮಾಡುವ ಪರಿಸರವನ್ನು ನಿರ್ಮಿಸಲು ರಜೆ ನಿಯಮಗಳಲ್ಲಿ ಮುಟ್ಟಿನ ರಜೆ ವ್ಯವಸ್ಥೆಯನ್ನು ಒಳಗೊಂಡಿರಬೇಕು. ಆದ್ದರಿಂದ ಮುಟ್ಟಿನ ರಜೆ ದುಡಿಯುವ ಮಹಿಳೆಯರ ಹಕ್ಕಿನ ಭಾಗವಾಗಿರಬೇಕು ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...