ಕಲಬುರಗಿ| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಜೆಸ್ಕಾಂ ಎಇಇ ಅಮೃತರಾವ್ ಯಲಾಲ್ ನಿವಾಸ ಮೇಲೆ ಲೋಕಾಯುಕ್ತ ದಾಳಿ

Date:

Share post:

ಕಲಬುರಗಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಿಗ್ಗೆ ಜೆಸ್ಕಾಂ (ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತರಾವ್ ಯಲಾಲ್ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ಆರು ವಿಶೇಷ ತಂಡಗಳನ್ನು ರಚಿಸಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಲೋಕಾಯುಕ್ತ ಅಧಿಕಾರಿಗಳು ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಸುಲೆಪೇಟ ನಲ್ಲಿರುವ ಮೂಲ ನಿವಾಸ, ಜಾಗೃತಿ ಕಾಲೋನಿಯ ಬಸವ ಅಪಾರ್ಟ್‌ಮೆಂಟ್‌ನಲ್ಲಿರುವ ಸುಮಾರು 40 ಫ್ಲಾಟ್‌ಗಳು, ಕೊತ್ತಂಬರಿ ಲೇಔಟ್‌ನಲ್ಲಿರುವ ಜೆಸ್ಕಾಂ ಕಚೇರಿ, ಜಾಗೃತಿ ಕಾಲೋನಿಯಲ್ಲಿರುವ ಮಾವನ ಮನೆ, ಹಾಗೂ ಸೇಡಂ ರಸ್ತೆಯ ಫೇಬರ್ ಪ್ಲಾಟಿನಂ ಸ್ಟುಡಿಯೋ ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಿದರು.

ಇದರ ಜೊತೆಗೆ, ನಂದೂರು ಕೈಗಾರಿಕಾ ಪ್ರದೇಶದಲ್ಲಿರುವ ಆಸ್ತಿಗಳು, ಕಲಬುರಗಿ ನಗರದಲ್ಲಿನ ಫ್ಲಾಟ್‌ಗಳು, ಸೂಳೆಪೇಟೆ ಭಾಗದಲ್ಲಿ ಅಂದಾಜು 15 ಎಕರೆ ಜಮೀನು ಹಾಗೂ ವಾಣಿಜ್ಯ ಮಳಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶೋಧ ಕಾರ್ಯಾಚರಣೆ ವೇಳೆ ಆಸ್ತಿ ದಾಖಲೆಗಳು, ಬ್ಯಾಂಕ್ ವ್ಯವಹಾರಗಳು, ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...