ಕಲಬುರಗಿ| ಹೈಕೋರ್ಟ್ ಕ್ರಾಸ್ ಬಳಿ ಲಾರಿ-ಕಾರು ಭೀಕರ ಡಿಕ್ಕಿ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

Date:

Share post:

ಕಲಬುರಗಿ: ನಗರದ ಹೊರವಲಯದ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅತಿವೇಗದಲ್ಲಿ ಬರುತ್ತಿದ್ದ ಲಾರಿಯು ಕಾರಿಗೆ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಡಿಸಿಪಿ ಶಾಲೂ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದರೂ, ಪೊಲೀಸರು ಶೀಘ್ರವೇ ಸಂಚಾರವನ್ನು ಸುಗಮಗೊಳಿಸಿದರು.

ಘಟನೆಯ ಕುರಿತು ಟ್ರಾಫಿಕ್-1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...