ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

Date:

Share post:

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳು ಇಂದು(ಮಂಗಳವಾರ) ನಸುಕಿನ ಜಾವ ಪರಾರಿಯಾಗಿರುವ ಘಟನೆ ನಡೆದಿದೆ.

ಪರಾರಿಯಾದ ಕೈದಿಗಳನ್ನು ಬೀದರ್‌ ಜಿಲ್ಲೆಯ ಬಸವ ಕಲ್ಯಾಣ ತಾಲ್ಲೂಕಿನ ಇಸ್ಲಾಂಪುರದ ಮಸ್ತಾನ್, ಔರಾದ್ ತಾಲ್ಲೂಕಿನ ಸಂತಾಪುರ ಗ್ರಾಮದ ಸಂತೋಷ ಬಸಪ್ಪ ಹಾಗೂ ಬೀದರ್‌ ತಾಲ್ಲೂಕಿನ ಬಕ್ಕಚೌಡಿ ಗ್ರಾಮದ ಸಾಗರ ಭೀಮರಾಯ ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೈದಿಗಳು ಜೈಲಿನ ಭದ್ರತಾ ಗೋಡೆ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಜೈಲು ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪರಾರಿಯಾದ ಕೈದಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಜಿಲ್ಲೆಯಾದ್ಯಂತ ಹಾಗೂ ಗಡಿ ಭಾಗಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಕೈದಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...