ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

Date:

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ಬಂಧಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ವೇದಾಂಗ್ ಅವರನ್ನು 9,950 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದರು.

ದೂರುದಾರ ಸಂಜೀವ್ ಅವರು ನೀಡಿದ ದೂರಿನ ಪ್ರಕಾರ, ಅವರ ಮಾವ ಕಿಶನ್ ಪವಾರ್ ನಿಧನ ಹೊಂದಿದ್ದು, ಅವರ ಪತ್ನಿ ದಸ್ಮಾಬಾಯಿ ಕಿಶನ್ ಪವಾರ್ ಅವರು ವಯೋಸಹಜ ಕಾರಣಗಳಿಂದ ಮುಂಬೈನಲ್ಲಿ ವಾಸವಾಗಿದ್ದಾರೆ. ಹಾಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಜಾದಪುರ ಗ್ರಾಮದ ಸರ್ವೆ ನಂ. 111/1 ರ ಖುಲ್ಲಾ ನಿವೇಶನ ಸಂಖ್ಯೆ 12 ಅನ್ನು ಮೃತ ಕಿಶನ್ ಪವಾರ್ ಅವರ ಹೆಸರಿನಿಂದ ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಡಲು ಅವರು ಮನವಿ ಮಾಡಿದ್ದರು.

ಈ ಸಂಬಂಧ ಅಗತ್ಯ ದಾಖಲೆಗಳಾದ ಮರಣ ಪ್ರಮಾಣಪತ್ರ, ಸ್ಟ್ಯಾಂಪ್ ಪತ್ರಗಳು ಹಾಗೂ ಇತರೆ ದಾಖಲೆಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಲಾಗಿತ್ತು. ಆದರೆ ಆಸ್ತಿ ವರ್ಗಾವಣೆಯ ಪ್ರಕ್ರಿಯೆ ಪೂರ್ಣಗೊಳಿಸಲು ಕಾರ್ಯದರ್ಶಿ ವೇದಾಂಗ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ, ಕಾರ್ಯದರ್ಶಿ ವೇದಾಂಗ್ ಅವರು 9,950 ಲಂಚ ಸ್ವೀಕರಿಸುತ್ತಿದ್ದ ವೇಳೆ ಅವರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದರು.

ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಪವಾರ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...