ಡಾ. ಮಲ್ಲಿಕಾರ್ಜುನ ಖರ್ಗೇ ಸಮ್ಮುಖದಲ್ಲಿ ಕಸಾಪದಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

Date:

Share post:

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹೊರತಂದಿರುವ 2024 ನೇ ಸಾಲಿನ ಸಂಪೂರ್ಣ ಕನ್ನಡದ ಅಂಕಿಗಳನ್ನು ಹೊಂದಿದ ಆಕರ್ಷಣೀಯವಾದ ದಿನದರ್ಶಿಕೆಯನ್ನು ರಾಜ್ಯಸಭೆಯ ವಿಪಕ್ಷ ನಾಯಕರೂ ಆದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೇ ಅವರ ಸಮ್ಮುಖದಲ್ಲಿ ಮಂಗಳವಾರ ನಗರದ ಬುದ್ಧವಿಹಾರದಲ್ಲಿ ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ವರ್ತಮಾನದ ಪೀಳಿಗೆಯನ್ನು ಜೋಡಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ತಾಲೂಕು ಹಾಗೂ ಹೋಬಳಿ ಘಟಕಗಳ ಮೂಲಕ ಗ್ರಾಮೀಣ ಭಾಗಕ್ಕೆ ಸಾಹಿತ್ಯ ಪರಿಷತ್ತನ್ನು ಕೊಂಡೊಯ್ದು ವಿದ್ಯಾರ್ಥಿ ಸಮುದಾಯಗಳನ್ನು ಜಾಗೃತಗೊಳಿಸಿ ಸಾಹಿತ್ಯದ ಬಗ್ಗೆ ಒಲವನ್ನು ಮೂಡಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ, ಶ್ರಮಿಕರ, ರೈತರ, ಶೋಷಿತರ ನಡುವೆ ಸಾಹಿತ್ಯದ ಕೊಂಡಿಯಾಗಿ ಪರಿಷತ್ತು ಕಾರ್ಯ ನಿರ್ವಹಿಸುತ್ತಿದೆ ಎಂದರು.

ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಅವರ ಬಳಗ ಬಹಳ ಕ್ರಿಯಾಶೀಲವಾಗಿ ಕಾರ್ಯ ಮಾಡುತ್ತಿದ್ದು, ಪರಿಷತ್ತನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಕಟ್ಟುತ್ತಿದ್ದು, ಉತ್ತಮ ಮತ್ತು ಹೊಸ ಹೆಜ್ಜೆಗಳನ್ನು ಇಡುವ ಮೂಲಕ ಸಾಹಿತ್ಯ– ಸಾಂಸ್ಕøತಿಕ ಕ್ಷೇತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತಿದ್ದಾರೆ.

ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಇದುವರೆಗೂ ಕೇವಲ ಸಾಹಿತಿಗಳ ಸಮೀಪದಲ್ಲಿತ್ತು. ಅದು ಎಲ್ಲ ಕನ್ನಡಿಗರ ಆಸ್ತಿ ಎಂದು ತೋರಿಸಲಿಕ್ಕೆ ಹೊರಟಿರುವ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಕಾರ್ಯ ಶ್ಲಾಘನೀಯ ಎಂದು ಮನದುಂಬಿ ಹಾರೈಸಿದರು.

ಯಾದಗಿರಿ ಶಾಸಕ ಚೆನ್ನಾರೆಡ್ಡಿ ತುನ್ನೂರ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ನಾಗನ್ನಾಥ ಯಳಸಂಗಿ ನಿಂಬರ್ಗಾ, ಪ್ರಮುಖರಾದ ನೀಲಕಂಠರಾವ ಮೂಲಗೆ, ಜಗನ್ನಾಥ ಗೋದಿ, ಪರಮೇಶ್ವರ ಖಾನಾಪೂರ, ದೇವೇಂದ್ರಪ್ಪ ಮರತೂರ, ಮಲ್ಲಿಕಾರ್ಜುನ ಪೂಜಾರಿ, ಪ್ರಶಾಂತ ಕೊರಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...