ನಾಳೆ “ಪಾಶ” ಕಿರುಚಿತ್ರ ಬಿಡುಗಡೆ!

Date:

Share post:

ಒಂಬತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ತಂದು ಕೊಟ್ಟ ‘ಪಾಶ’ ಚಿತ್ರ ನಾಳೆ(ಮೇ.28ರಂದು) ಬೆಳಗ್ಗೆ 9:30ಕ್ಕೆ ಈ ಕಿರುಚಿತ್ರವು ‘ಎ ಟು ಮೂವೀಸ್’ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ ಎಂದು ಈ ಕಿರುಚಿತ್ರದ ನಿರ್ದೇಶಕರಾದ ಲಕ್ಷ್ಮೀಕಾಂತ ಜೋಶಿ ತಿಳಿಸಿದರು.

ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಈ ಚಿತ್ರ ಕಲಬುರಗಿ ಜಿಲ್ಲೆಗೆ ಪ್ರಥಮವಾಗಿ ಒಂಭತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ತಂದು ಕೊಟ್ಟ ಹೆಗ್ಗಳಿಕೆಯಿದೆ. ಈ ಚಿತ್ರಕ್ಕೆ ಇನ್ನೊಂದು ಪ್ಲಸ್ ಪಾಯಿಂಟ್ ಅಂದರೆ ಜನಪ್ರಿಯ ಸಾಹಿತಿಗಳಾದ ಜೋಗಿ ಅವರ ‘ಲೈಫ್ ಇಸ್ ಬ್ಯುಟಿಫುಲ್’ ಪುಸ್ತಕದ ಒಂದು ಕಥೆ ಈ ಕಿರುಚಿತ್ರಕ್ಕೆ ಮೂಲಧಾರವಾಗಿದೆ ಎಂದರು.

ಪಾಶ
ಪಾಶ

ಗಧಾಗ್ರಜ ಫಿಲಂಸ್ ನ ಅಡಿಯಲ್ಲಿ ಈ ಕಿರುಚಿತ್ರ ನಿರ್ಮಾಣಗೊಂಡಿದ್ದು. ತಮ್ಮ ನಿರ್ದೇಶನದಲ್ಲಿ ಚೊಚ್ಚಲ ಕಿರುಚಿತ್ರವಾಗಿದೆ. ಈ ಚಿತ್ರದ ಮುಖ್ಯಪಾತ್ರದಲ್ಲಿ ಕಿರುತೆರೆಯ ( ಮುಕ್ತ ಮುಕ್ತ , ಮಹಾಸತಿ, ಗಂಗಾ ಧಾರಾವಾಹಿ ಖ್ಯಾತಿಯ) ಹಿರಿಯ ನಟ ವಿಜಯ ಕುಲಕರ್ಣಿ ನಟಿಸಿದ್ದರೆ, ಕಲರ್ಸ್ ಕನ್ನಡ ವಾಹಿನಿಯ , ಕಾಮಿಡಿ ಕಂಪನಿ ಖ್ಯಾತಿಯ ಸೋಮಶಂಕರ್ ಬಿರಾದಾರ ಅವರು ಪ್ರಮುಖ ಪಾತ್ರವೊಂದರಲ್ಲಿ ತೆರೆ ಹಂಚಿಕೊಂಡಿದ್ದಾರೆ. ರಂಗಾಯಣ ಕಲಾವಿದರಾದ ಉಮೇಶ್ ಪಾಟೀಲ್ , ಶ್ರೀನಿವಾಸ ದೋರನಳ್ಳಿ , ಕೌಶಿಕ್ ಕುಲಕರ್ಣಿ , ಪ್ರದೀಪ ಬೆಳಮಗಿ , ರಿಷಿಕೇಶ ಕುಲಕರ್ಣಿ , ನೀಲಾಂಬಿಕಾ , ಲಕ್ಷ್ಮೀ ಅಥಣಿ ತಾರಾಗಣದಲ್ಲಿದ್ದಾರೆ. ಕುಮಾರಿ ಸ್ಪೂರ್ತಿ ಅಥಣಿ , ಸ್ನೇಹ , ಕಾವ್ಯ , ವೈಷ್ಣವಿ ಬಾಲ ಕಲಾವಿದೆಯರಾಗಿ ಅಭಿನಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಚಿತ್ರಕ್ಕೆ ಸಹ ನಿರ್ದೇಶಕರಾಗಿ ಸೋಮಶಂಕರ್ ಬಿರಾದಾರ , ಸಹಾಯಕ ನಿರ್ದೇಶಕರಾಗಿ ಅಂಬರೀಶ್ ಮರಾಠಾ ಕಾರ್ಯ ನಿರ್ವಹಿಸಿದ್ದಾರೆ. ಛಾಯಾಗ್ರಾಹಕರಾಗಿ ರಾಘು ಮರೆನೂರ , ಸಂಕಲನ ಓಂಕಾರ ಮತ್ತು ಭಾಗ್ಯೇಶ್ ಪಾಟೀಲ್ ಜಂಟಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಾಗೂ ಹಂಸಲೇಖ ಅವರ ಗರಡಿಯಲ್ಲಿ ಪಳಗಿದ ಸುಚೀನ್ ಶರ್ಮಾ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದು ತಿಳಿಸಿದರು.

pasha
Pasha

ಪತ್ರಿಕಾಗೋಷ್ಟಿಯಲ್ಲಿ ನಿರ್ದೇಶಕ ಲಕ್ಷ್ಮೀಕಾಂತ ಜೋಶಿ , ನಟರಾದ ವಿಜಯ್ ಕುಲಕರ್ಣಿ , ಕೌಶಿಕ್ ಕುಲಕರ್ಣಿ , ರಾಹುಲ್ ಕಟ್ಟಿ , ಅಂಬರೀಷ್ ಮರಾಠ , ನೀಲಾಂಬಿಕಾ, ಪ್ರದೀಪ್ ಬೆಳಮಗಿ ಹಾಗೂ ಛಾಯಾಗ್ರಾಹಕ ರಾಘು ಮರೆನೂರ್ ಉಪಸ್ಥಿತರಿದ್ದರು.

ಮೇ.20ಕ್ಕೆ ‘ಪಾಶ’ ಕಿರುಚಿತ್ರದ ಟ್ರೈಲರ್ ಬಿಡುಗಡೆ!

> ಯಾವ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ?

1. ಬೆಂಗಳೂರಿನ “ವಿಡಿಯೋಟೇಪ್ ಫಿಲ್ಮ್ ಫೆಸ್ಟಿವಲ್” ನಲ್ಲಿ ‘ಉತ್ತಮ ಸಾಮಾಜಿಕ ಸಂದೇಶ’ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ.
2. ಕೊಲ್ಕತ್ತಾದ ಪ್ರತಿಷ್ಠಿತ “ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವ”ದಲ್ಲಿ “ಉತ್ತಮ ಕನ್ನಡ ಕಿರುಚಿತ್ರ” ಹಾಗೂ ಮುಂಬೈನ “ಜಾಶ್ನೆ ಚಲನಚಿತ್ರೋತ್ಸವ” ದಲ್ಲಿಯೂ ಉತ್ತಮ ಕನ್ನಡ ಕಿರುಚಿತ್ರ” ಪ್ರಶಸ್ತಿ ಪಡೆದಿದೆ.
3. ಮಹಾರಾಷ್ಟ್ರದ “ರೀಲ್ಸ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ” ಉತ್ತಮ ಕಿರುಚಿತ್ರ ” ವಿಭಾಗದಲ್ಲಿ ತನ್ನ ಛಾಪು ಮೂಡಿಸಿದೆ.
4. ಆನ್ ಲೈನ್ ಫೆಸ್ಟಿವಲ್ ಗಳಾದ “ಡೈಮಂಡ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ” ದಲ್ಲಿ “ಉತ್ತಮ ಕತೆ” “ಉತ್ತಮ ಕಿರುಚಿತ್ರ ”
5.”ಐಕಾನಿಕ್ ಶಾರ್ಟ್ ಸಿನಿ ಅವಾರ್ಡ್ಸ್” ನಲ್ಲಿಯೂ “ಉತ್ತಮ ಕತೆ” , “ಉತ್ತಮ ಪ್ರಾಯೋಗಿಕ ಕಿರುಚಿತ್ರ” , “ಉತ್ತಮ ಕನ್ನಡ ಕಿರುಚಿತ್ರ” ವಿಭಾಗದಲ್ಲಿ ಜಯಭೇರಿ ಭಾರಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...