ಕಲಬುರಗಿ| ಸಾರಿಗೆ ಸಿಬ್ಬಂದಿಯ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

Date:

Share post:

ಕಲಬುರಗಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ.

ಅಫಜಲಪುರ ತಾಲೂಕಿನ ಅರ್ಜುಣಗಿ ಬಸ್ ನಿಲ್ದಾಣಕ್ಕೆ ಬಸ್ ತಲುಪಿದ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರು ಬಸ್‌ನಲ್ಲಿಯೇ ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಸಿಬ್ಬಂದಿಯ ಗಮನಕ್ಕೆ ಬಂದಿವೆ. ತಕ್ಷಣ ಕಾರ್ಯಪ್ರವೃತ್ತರಾದ ಚಾಲಕ ಮತ್ತು ನಿರ್ವಾಹಕರು, ಗ್ರಾಮಸ್ಥರ ಸಮ್ಮುಖದಲ್ಲಿ ಆಭರಣಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ವಾರಸುದಾರರನ್ನು ಪತ್ತೆಹಚ್ಚಿ ಅವುಗಳನ್ನು ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ.

ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆ ಮೆರೆದ ಸಾರಿಗೆ ಸಿಬ್ಬಂದಿಯಾದ ಚಾಲಕ ಮೌನೇಶ ಸುತಾರ ಮತ್ತು ನಿರ್ವಾಹಕ ಮಾಳಪ್ಪ ಪೂಜಾರಿ ಹಿಂಚಗೇರಾ ಅವರ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಪ್ರಯಾಣಿಕರ ಅಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿ ಮರಳಿಸುವ ಮೂಲಕ ಸಾರಿಗೆ ಸಿಬ್ಬಂದಿ ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇಂತಹ ಪ್ರಾಮಾಣಿಕ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಅರ್ಜುಣಗಿ ಗ್ರಾಮದ ಯುವ ಮುಖಂಡ ರಹಿಮಾನ ಮನಿಯಾರ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸೆಂಟರ್ ಆಫ್ ಎಕ್ಸ್ ಲೆನ್ಸ್ ಇಂಕ್ಯೂಬೇಷನ್ ಸೆಂಟರ್ ಕಚೇರಿ ಉದ್ಘಾಟಿಸಿದ ಸಚಿವ‌ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ನಗರದ ಗಾಜಿಪುರ ಚಕ್ಕರ್ ಕಟ್ಟಾ ಪ್ರದೇಶದಲ್ಲಿ ಕೃಷಿ ಉದ್ಯಮಕ್ಕೆ...

BREAKING NEWS: ಕಲಬುರಗಿ| ಕಬ್ಬು ಕಟಾವು; 3,400 ರೂ. ನೀಡಲು ಕಾರ್ಖಾನೆಗಳು ಒಪ್ಪಿಗೆ: ಡಿಸಿ ಇಕ್ರಮ್ ಶರೀಫ್

ಕಲಬುರಗಿ: ಪ್ರಸಕ್ತ 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆಯಲಾದ ಕಬ್ಬು ರೈತರಿಂದ ಖರೀದಿಗೆ...

ಕಲಬುರಗಿ| ನ.14ರಂದು ‘ಕಲ್ಯಾಣ ಕರ್ನಾಟಕ ಸ್ಟಾರ್ಟ್‌ಅಪ್ ಸಂವಾದ, ನೂತನ ಉದ್ಯಮಶೀಲತಾ ಕೇಂದ್ರ ಉದ್ಘಾಟನೆ: ಡಿಸಿ ಇಕ್ರಮ್ ಶರೀಫ್ 

ಕಲಬುರಗಿ: ಬೆಂಗಳೂರಿನ ಆಚೆಗೂ ಐಟಿ-ಬಿಟಿ ಹಾಗೂ ನವೋದ್ಯಮ ವಲಯವನ್ನು ವಿಸ್ತರಿಸುವ ರಾಜ್ಯ...