ಕಲಬುರಗಿ| ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

Date:

Share post:

ಕಲಬುರಗಿ: ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ರದ್ದುಪಡಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (AIDSO) ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ನಗರದ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಯಲ್ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಳಿಕ ಮಾತನಾಡಿದ ಸಂಘಟನೆಯ ಮುಖಂಡರು, 2020-20ನೇ ಸಾಲಿನಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್.ಆರ್.ಐ ಕೋಟಾವನ್ನು ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸುತ್ತೇವೆ. ಇದು ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಈಗಾಗಲೇ ಅಖಿಲ ಭಾರತ ಕೋಟಾದಡಿಯಲ್ಲಿ 15 ಪ್ರತಿಶತ ನೀಡಲಾಗುತ್ತದೆ. ಅದರೊಳಗೆ ಮತ್ತೆ 15 ಪ್ರತಿಶತ ಎನ್.ಆರ್.ಐ ಗೆ ಮೀಸಲಿಟ್ಟರೆ ಬೆರಳಣಿಕೆಯಷ್ಟು ಸ್ಥಾನಗಳು ನಮ್ಮ ವಿದ್ಯಾರ್ಥಿಗಳ ಪ್ರವಾಗಳಿವೆ ಎಂದು ಆಕ್ರೋಶ ಹೊರಹಾಕಿದರು.

 

ಶ್ರೀಮಂತ ಎನ್.ಆರ್.ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಅವಕಾಶವನ್ನು ರಾಜ್ಯ ಸರ್ಕಾರವು ಮೊಟಕುಗೊಳಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

 

ಸದರಿ ಎನ್.ಆರ್. ಐ ಕೋಟಾಕ್ಕೆ ಮೀಸಲಿಡುತ್ತಿರುವುದನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

 

ಈ ಸಂದರ್ಭದಲ್ಲಿ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿಗಳಾದ ತುಳಜರಾಮ, ಜಿಲ್ಲಾ ಉಪಾಧ್ಯಕ್ಷರಾದ ಪ್ರೀತಿ ದೊಡ್ಡಮನಿ, ಗೋವಿಂದ ಯಳವಾರ, ನಾಗರಾಜಿ ರಾವೂರ್, ಜಿಲ್ಲಾ ಸಮಿತಿ ಸದಸ್ಯರಾದ ಯುವರಾಜ, ರಾಹುಲ್, ಸಿದ್ದಾರ್ಥ್, ಸ್ಫೂರ್ತಿ, ಸಂಪತಿ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...