ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಸೆಪ್ಟೆಂಬರ್ 12ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕೆಜಿಪಿ ಗ್ರೂಪ್ ಆಫ್ ಕಂಪನಿಯಲ್ಲಿ ಬ್ರ್ಯಾಂಚ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಬ್ರ್ಯಾಂಚ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದೇ ಪದವಿ/ ಎಮ್.ಬಿ.ಎ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಶೋರೂಮ್ ಎಕ್ಸಿಕ್ಯೂಟಿವ್, ಸೇಲ್ಸ್ ಎಕ್ಸಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್ ಮತ್ತು ಮಾರ್ಕೇಟಿಂಗ್ ಇನ್‍ಚಾರ್ಜ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಫೀಸ್ ಬಾಯ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ನಿಸಾರ ಕಲೆಕ್ಷನ್‍ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂರ್ದಶನದಲ್ಲ್ಲಿ ಭಾಗವಹಿಸಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9986601040 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.


