ಕಲಬುರಗಿ| ಶಿಕ್ಷಣ ಇಲಾಖೆಯಿಂದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಶಿಬಿರಕ್ಕೆ ಶಶೀಲ್ ನಮೋಶಿ ಶ್ಲಾಘನೆ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಹೇಳಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ , ಹಾಗೂ ಉಪನ್ಯಾಸಕರ ಸಂಘ ಕಲಬುರ್ಗಿ ಶಾಖೆಯ ಸಹಯೋಗದಲ್ಲಿ ಜರುಗಿದ ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಹಾಗೂ ರಾಜ್ಯ ಶಾಸ್ತ್ರ ವಿಷಯಗಳ ಉಪನ್ಯಾಸಕರಿಗೆ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಫಲಿತಾಂಶ ಕುಸಿಯುತ್ತಿರುವ ದಕ್ಕೆ ಉಪನ್ಯಾಸಕರು ಕಾರಣರಲ್ಲ ಈ ಭಾಗದಲ್ಲಿ ಪೂರ್ಣ ಪ್ರಮಾಣದ ಶಿಕ್ಷಕರ, ಉಪನ್ಯಾಸಕರ ನೇಮಕಾತಿ ಇಲ್ಲದೆ ಇರುವುದು ಕಾರಣವಾಗಿದೆ ಎಂದು ಹೇಳಿದರು‌.

 

ಈ ಪುನಶ್ಚೇತನ ತರಬೇತಿ ಶಿಬಿರದಲ್ಲಿ ಭಾಗವಹಿಸಿರುವ ವಿಷಯವಾರು ಉಪನ್ಯಾಸಕರು ಇಲ್ಲಿ ತರಬೇತಿ ಪಡೆದು ದೃಡ ಮನಸ್ಸಿನಿಂದ ಕಾರ್ಯ ನಿರ್ವಹಿಸಿ ಈ ಬಾರಿಯ ಫಲಿತಾಂಶ ಸುಧಾರಣೆ ಮಾಡಬೇಕು ಎಂದು ಹೇಳಿದರು‌.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇಮಕಾತಿಗೆ ಸರ್ಕಾರ ಕ್ರಮ ವಹಿಸಲು ಈಗಾಗಲೇ ಹಲವಾರು ಬಾರಿ ಒತ್ತಡ ಹೇರಲಾಗಿದೆ, ಬಡ್ತಿ ಮೂಲಕವು ನೇಮಕಾತಿ ಮಾಡಿಕೊಳ್ಳಲು ಒತ್ತಾಯಿಸಲಾಗಿದೆ ಎಂದರು.

ನನ್ನ ರಾಜಕೀಯ ಸ್ಥಾನಮಾನಕ್ಕೆ ನೀವೆ ಕಾರಣಿಭೂತರು ಅದಕ್ಕಾಗಿ ನಿಮ್ಮ ಕೆಲಸ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಕಲಬುರಗಿಯ ಉಪನಿರ್ದೇಶಕರಾದ ಸುರೇಶ್ ಅಕ್ಕಣ್ಣ ವಹಿಸಿದ್ದರು. ಪದವಿಪೂರ್ವ ಕಾಲೇಜಿನ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ ಚಂದ್ರಶೇಖರ ದೊಡಮನಿ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಸವರಾಜ ಬಿರಾದಾರ, ಉಪನ್ಯಾಸಕರ ಸಂಘ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ, ಸಂಘಟಕ ಐ.ಕೆ ಪಾಟೀಲ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯ ಡಾ. ಮೋಹನ್ ರಾಜ್ ಪತ್ತಾರ ಸ್ವಾಗತಿಸಿದರು. ನರಸಪ್ಪ ರಂಗೋಲಿ ನಿರೂಪಿಸಿದರು. ಬಸವರಾಜ ಗೋಣಿ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...