ಕಲಬುರಗಿ| ಜೀವನದ ಮೌಲ್ಯಗಳನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಬಿತ್ತಿ ಬೆಳೆಸಿದೆ: ಡಾ. ಸವಿತಾ ತಿವಾರಿ

Date:

Share post:

ಕಲಬುರಗಿ: ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ಈ ಸಮಾಜದಲ್ಲಿ ಗುಣಮಟ್ಟ ಶಿಕ್ಷಣ, ಉತ್ತಮ ಸಂಸ್ಕøತಿ, ಜೀವನದ ಮೌಲ್ಯಗಳನ್ನು ಬಿತ್ತಿ ಬೆಳೆಸಿದೆ ಎಂದು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ) ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಅಭಿಪ್ರಾಯ ಪಟ್ಟರು.

ನಗರದ ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಹಾಗೂ ಸಂಶೋಧನಾ ವಿಭಾಗದಲ್ಲಿ ಆಯೋಜಿಸಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುಗೆ ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಪತ್ರಿಕೋದ್ಯಮ ಶಿಕ್ಷಣ ಈ ಸಮಾಜಕ್ಕೆ ಅವಶ್ಯಕವಿದೆ. ಭಾವಿಪತ್ರಿಕರ್ತರಾಗಿ ಹೊರ ಹೊಮ್ಮುವ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಪ್ರಾಮಾಣಿಕ ಪತ್ರಕರ್ತರಾಗಿ ಹೊರಹೊಮ್ಮಲಿ ಎಂದು ಹೇಳಿದರು.

ಪ್ರಸ್ತುತ ದಿನಮಾನಗಳಲ್ಲಿ ಪತ್ರಿಕೋದ್ಯಮ ಎನ್ನುವುದು ಒಂದು ಅತ್ಯಂತ ಉನ್ನತ ಮಟ್ಟದ ಕ್ಷೇತ್ರವಾಗಿ ಬೆಳೆದು ನಿಂತಿದೆ. ಪತ್ರಿಕೆ ಮತ್ತು ಮಾಧ್ಯಮಗಳು ಜನರ ಕಣ್ಣು-ಕಿವಿಗಳಂತಿವೆ. ನಿಜವಾದ ಮಾಹಿತಿ ತಲುಪಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದರು.

 

ವಿದ್ಯಾರ್ಥಿಗಳಿಗೆ ನೀವು ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಾಲಿಡುವಾಗ ಅಡಚಣೆಗಳಿರುತ್ತವೆ. ಆದರೆ ವೃತ್ತಿಗೆ ಬದ್ಧರಾಗಿದ್ದರೆ ಯಶಸ್ಸು ಖಚಿತ. ಓದು, ಅಧ್ಯಯನ ಹಾಗೂ ಸಮಾಜದ ಧ್ವನಿಯಾಗಿ ಕೆಲಸ ಮಾಡುವ ದೃಢನಂಬಿಕೆ ಬೆಳೆಸಿಕೊಳ್ಳಬೇಕು. ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ಮಾತ್ರ ನೀಡುವುದಲ್ಲ, ಸಮಾಜದ ಬದಲಾವಣೆಗೆ ಮಾರ್ಗದರ್ಶನ ನೀಡುವ ಶಕ್ತಿ ಹೊಂದಿದೆ ಎಂದು ಹೇಳಿ ಶರಣ ಸಂಸ್ಥೆಯ ಹಳೆಯ ವಿದ್ಯಾಥಿಯಾಗಿರುವೆ ಎಂದು ತಮ್ಮ ಶೈಕ್ಷಣಿಕ ಜೀವನ ಮತ್ತು ಗುರುಗಳನ್ನು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವವಿದ್ಯಾಲಯ ಡೀನ್‍ರಾದ ಡಾ. ಲಕ್ಷ್ಮಿ ಪಾಟೀಲ ಮಾಕಾ ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಪತ್ರಕರ್ತರಾಗಿ ಈ ಸಂಸ್ಥೆಯ ಬಾಗಿಲು ಸದಾ ನಿಮಗಾಗಿ ತೆರೆದಿರುತ್ತದೆ. ನಿಮ್ಮ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸಿದರು.

ಪತ್ರಿಕೋದ್ಯಮದಲ್ಲಿ ಪ್ರಾಮಾಣಿಕತೆ, ನಿಷ್ಠೆ ಮತ್ತು ಧೈರ್ಯ ಅತ್ಯಂತ ಮುಖ್ಯ. ಸುದ್ದಿಯನ್ನು ಸಂಗ್ರಹಿಸುವಾಗ ಸತ್ಯವನ್ನು ಮಾತ್ರ ಸಮಾಜದ ಮುಂದಿಡಬೇಕು. ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಮಾಧ್ಯಮಗಳು ವೇಗವಾಗಿ ಬೆಳೆಯುತ್ತಿದ್ದರೂ ಅದರೊಂದಿಗೆ ನಿಖರತೆ ಕಾಪಾಡಿಕೊಳ್ಳುವ ಹೊಣೆಗಾರಿಕೆಯೂ ಪತ್ರಕರ್ತರ ಮೇಲಿದೆ ಎಂದು ಅಭಿಪ್ರಾಯಪಟ್ಟರು.

 

ಸಮಾಜ ವಿಜ್ಞಾನ ನಿಕಾಯದ ಡೀನ್ ಟಿ.ವಿ. ಶಿವಾನಂದನ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಅಂತಿಮ ಸೆಮೆಸ್ಟರ್ ಫಲಿತಾಂಶ ಬರುವ ಮುಂಚೆಯೇ ಹಲವಾರು ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಂಡಿರುವುದು ಮತ್ತು ಕೆಲವರು ಸ್ವಂತ ಉದ್ಯೋಗ ಆರಂಭಿಸಿರುವುದು ನಮ್ಮ ವಿಭಾಗದ ಹೆಮ್ಮೆ ಎಂದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಡಾ. ಸುನಿತಾ ಬಿ. ಪಾಟೀಲ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸುಮಂಗಲಾ ರೆಡ್ಡಿ, ಆಂಗ್ಲ ಮುಖ್ಯಸ್ಥರಾದ ಡಾ. ಎಸ್.ಎಸ್. ಪಾಟೀಲ, ಡಾ. ಶಾಮಲಾ, ಪ್ರೊ. ಅಶ್ವಿನಿ ರೆಡ್ಡಿ, ಅನಿತಾ ಗಾಯಧನ್‍ಕರ್, ನಿರ್ಮಲಾ ದೊರೆ, ಅಮರ ನಡುವಿನಕೇರಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಥಮ ಸೆಮೆಸ್ಟರ್ ವಿದ್ಯಾರ್ಥಿ ಆಕಾಶ ಅಥರ್ಗ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಐಶ್ವರ್ಯ ಹೀರೆಮಠ ಪ್ರಾರ್ಥನೆ ಗೀತೆ ಹಾಡಿದರು. ಸುಪ್ರೀಯಾ ಯಂಕಂಚಿ ವಂದಿಸಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ಹಾಗೂ ನಾಲ್ಕನೇ ಸೆಮೆಸ್ಟರ್‍ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಹಲವು ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...