ಕಲಬುರಗಿ| ಸೆ.15 ರಂದು ವಿಭಾಗಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಕಲಬುರಗಿ ವಿಭಾಗಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ಅಥ್ಲೇಟಿಕ್ಸ್, ಬಾಸ್ಕೆಟ್‍ಬಾಲ್, ಹ್ಯಾಂಡಬಾಲ್, ಫುಟಬಾಲ್, ಟೆನ್ನಿಸ್, ಈಜು ಹಾಗೂ ಜೂಡೋ ಕ್ರೀಡೆಗಳು ಇದೇ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 9 ಗಂಟೆಗೆ ಕೆಳಕಂಡ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಂತಹ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಕ್ರೀಡಾಪಟುಗಳು ಭಾಗವಹಿಸಲು ಅರ್ಹರಿರುತ್ತಾರೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ-ಅಥ್ಲೇಟಿಕ್ಸ್, ಈಜು, ಜೂಡೋ, ಟೆನ್ನಿಸ್ ಕ್ರೀಡೆಗಳು. ಕಲಬುರಗಿಯ ಹೈಕೋರ್ಟ್ ಹತ್ತಿರದ ಕೆ.ಹೆಚ್.ಬಿ. ಅಕ್ಕಮಹಾದೇವಿ ಕಾಲೋನಿಯ ಬಾಸ್ಕೆಟಬಾಲ್ ಕ್ರೀಡಾಂಗಣದಲ್ಲಿ- ಬಾಸ್ಕೆಟಬಾಲ್ ಕ್ರೀಡೆಯನ್ನು. ಕಲಬುರಗಿಯ ಹೆಚ್.ಕೆ.ಇ. ಪಾಲಿಟೆಕ್ನಿಕ್ ಕ್ರೀಡಾಂಗಣದಲ್ಲಿ-ಹ್ಯಾಂಡಬಾಲ್ ಕ್ರೀಡೆಯನ್ನು ಹಾಗೂ ಕಲಬುರಗಿಯ ವಿರೇಂದ್ರ ಪಾಟೀಲ ಬಡಾವಣೆಯ ಎಂ.ಬಿ ನಗರದ ಫುಟಬಾಲ್ ಅಂಕಣದಲ್ಲಿ-ಫುಟಬಾಲ್ ಕ್ರೀಡೆಗಳು ನಡೆಯಲಿವೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ವಿಜೇತ ಕ್ರೀಡಾಪಟುಗಳು ಕಡ್ಡಾಯವಾಗಿ ಆನ್‍ಲೈನ್ ನೋಂದಣಿ ಮಾಡಿರಬೇಕು ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...