ಕಲಬುರಗಿ| ಸೆ.14ರಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ಸಂಗಾಗೆ ‘ಸ್ವರ್ಣ ಸಿರಿ’ ಪ್ರಶಸ್ತಿ ಪ್ರದಾನ

Date:

Share post:

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಮಾಡುವ `ಸ್ವರ್ಣ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಸೆಪ್ಟೆಂಬರ್ 14 ರ ಬೆಳಗ್ಗೆ 9.45 ಕ್ಕೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಸಮಾಜಮುಖಿ ಕಾರ್ಯಗಳ ಮೂಲಕ ಸಮಾಜ ಸೇವೆಯಲ್ಲಿ ನಿರಂತರ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಕರ್ನಾಟಕ ಸರ್ಕಾರದ ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರ ಸಂಘದ ಅಧ್ಯಕ್ಷ ರಮೇಶ ಸಂಗಾ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಮಾಜದಲ್ಲಿ ವ್ಯಕ್ತಿ ಹಲವಾರು ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗಳನ್ನು ಮಾಡಿದಾಗ ಅಂತಹವರನ್ನು ಗುರುತಿಸಿ ಗೌರವಿಸುವ ಕೆಲಸ ಪರಿಷತ್ತು ಜಿಲ್ಲೆಯಲ್ಲಿ ಮಾಡುತ್ತಿದೆ ಎಂದು ವಿವರಿಸಿದರು. ಕನಕಶ್ರೀ ಪ್ರಶಸ್ತಿ ಪುರಸ್ಕøತರೂ ಆದ ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮರಾಜ ಜವಳಿ, ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ ಅವರುಗಳು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...