ಕಲಬುರಗಿ| ಸೆ.16ರಂದು ಹಿಂದು ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ, ವಿಸರ್ಜನೆ

Date:

Share post:

ಕಲಬುರಗಿ: ಸೆ.16ರಂದು ಬೆಳಿಗ್ಗೆ ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಹಿಂದು ಮಹಾಗಣಪತಿ ಸಮಿತಿಯಿಂದ ಪ್ರತಿಷ್ಟಾಪನೆ ಮಾಡಲಾದ 21 ದಿನಗಳ ಹಿಂದು ಮಹಾಗಣಪತಿಯ ಅದ್ಧೂರಿ ಶೋಭಾಯಾತ್ರೆ ಹಾಗೂ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಗಂಗಾ, ಕಾರ್ಯದರ್ಶಿ ಶ್ರೀಮಂತ ರಾಜು ನವಲದಿ ಜಂಟಿಯಾಗಿ ತಿಳಿಸಿದರು.

ನಗರದ ಕೋಟೆಯ ಮುಂಭಾಗದಲ್ಲಿ ಶನಿವಾರ ಸಮಿತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಹಿಂದು ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅದ್ಧೂರಿ ಶೋಭಾಯಾತ್ರೆಯೂ ಕೋಟೆಯಿಂದ ಪ್ರಾರಂಭವಾಗಿ ನಗರದ ಪ್ರಕಾಶ್ ಏಶಿಯನ್ ಮಾಲ್, ಹುಮನಾಬಾದ್ ಬೇಸ್, ಚೌಕ್ ಪೋಲಿಸ್ ಠಾಣೆ,ಸುಪರ್ ಮಾರ್ಕೇಟ್, ಜಗತ್ ವೃತ್ತ,ಸಂಗೋಳ್ಳಿ ರಾಯಣ್ಣನ ವೃತ್ತದಿಂದ ಅಪ್ಪನ ಕೆರೆಯಲ್ಲಿ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದರು.

21 ದಿನಗಳ ಕಾಲದ ಗಣೇಶೋತ್ಸವದಲ್ಲಿ ಪಂಚ್ ಪರಿವರ್ತನೆ ಕುರಿತು ಜಾಗೃತಿ ಮೂಡಿಸಲಾಗಿದ್ದು, ಕಲಿಕಾ ಕೇಂದ್ರದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಂಗೀತ, ಭರತನಾಟ್ಯ,ಕೊಳಲು ವಾದನ,ಭಜನೆ,ತಬಲಾ ವಾದನ ಸೇರಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.ಸೆ.16ರ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಹಿಂದು ಮಹಾಗಣಪತಿಯ ಅದ್ಧೂರಿ ಶೋಭಾಯಾತ್ರೆಗೆ ದೇಶಿ ವಾದ್ಯಗಳಾದ ನಾಸಿಕ್ ಡೋಲು,ಪರಳಿಯ ಡೋಲ್ ತಾಷಾ,ಸಿಂದಗಿ ಚಿಟ್ಟಲಗಿ, ಸ್ಥಳೀಯ ಡೋಳ್ಳು,ಹಲಗಿ ಭಜನೆ ಶೋಭಾಯಾತ್ರೆಗೆ ಮತ್ತಷ್ಟು ಮೆರಗು ನೀಡಲಿವೆ ಎಂದು ಸಮಿತಿಯ ಕಾರ್ಯದರ್ಶಿ ರಾಜು ಶ್ರೀಮಂತ ನವಲದಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಿಂದು ಮಹಾಗಣಪತಿ ಸಮಿತಿಯ ಉಪಾಧ್ಯಕ್ಷರಾದ,ಕೆಕೆಸಿಸಿಐ ಅಧ್ಯಕ್ಷ ಶರಣು ಪಪ್ಪಾ,ಜಗದೀಶ್ ಕಟ್ಟಿಮನಿ,ಸಿದ್ದರಾಜ ಬಿರಾದಾರ್,ಸಹ ಕಾರ್ಯದರ್ಶಿ ಸಂತೋಷ್ ಕಾಮತ್, ಡಾ.ಚರಣ ಹೊನ್ನಳ್ಳಿ, ಕೋಶಾಧ್ಯಕ್ಷ ಶ್ರೀಶೈಲ ಮೂಲಗೆ, ಸದಸ್ಯರಾದ ಸಿದ್ಧಯ್ಯ ಸ್ವಾಮಿ,ನಾಗಯ್ಯ ಸ್ವಾಮಿ, ದೀಪಕ್ ಪವಾರ್, ಸಂಜು ರೇವಣಕರ್ , ಶಿವರಾಜ್ ಸಂಗೋಳಗಿ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...