ಕಲಬುರಗಿ| ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧದ ಕೇಸ್: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗೆ ಬಿಗ್ ರಿಲೀಫ್

Date:

Share post:

ಕಲಬುರಗಿ: ರಾಜಕೀಯ ವಿರೋಧಿಗಳು ಒಬ್ಬರನ್ನೊಬ್ಬರು ಕಳ್ಳ ಎಂದು ಕರೆಯುವುದು ಕ್ರಿಮಿನಲ್‌ ಪ್ರಕರಣ ದಾಖಲಾತಿಗೆ ಆಧಾರವಾಗದು ಎಂದಿರುವ ಹೈಕೋರ್ಟ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ‘ಅಕ್ಕಿ ಕಳ್ಳ’ ಎಂದು ಸಂಬೋಧಿಸಿದ್ದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮಣಿಕಂಠ ರಾಠೋಡ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

 

ಉದ್ದೇಶಪೂರ್ವಕ ಅಪಮಾನ ಮತ್ತು ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಇನ್ನಿತರಕ್ಕೆ ಸಂಬಂಧಿಸಿದ ನ್ಯಾಯಿಕ ಪ್ರಕ್ರಿಯೆ ರದ್ದು ಕೋರಿ ಮಣಿಕಂಠ ರಾಠೋಡ್ ಸಲ್ಲಿಸಿದ್ದ ಅರ್ಜಿಯನ್ನು ಕಲಬುರಗಿಯಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಪ್ರಕಟಿಸಿದೆ.

 

ಮಣಿಕಂಠ ರಾಠೋಡ್ ಅವರು 2025ರ ಮೇ 26ರಂದು ತಮ್ಮ ಫೇಸ್‌ಬುಕ್‌ನ ಖಾತೆಯಲ್ಲಿ ಅಪಲೋಡ್ ಮಾಡಿದ್ದ ವಿಡಿಯೋದಲ್ಲಿ ಸಚಿವ ಪ್ರಿಯಾಂಕ್‌ ಅವರನ್ನು “ಲೇ ಅಕ್ಕಿ ಕಳ್ಳ” ಎಂದು ಕರೆದು ಅವಹೇಳನ ಮಾಡಿದ್ದಾರೆ. ಅಲ್ಲದೆ, ಕೋಲಿ ಕಬ್ಬಲಿಗ ಎಸ್‌ಟಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಾಮಾದಾರ ಅವರನ್ನು “ಟೋಪಿ ಲಚ್ಚ್ಯಾ” ಎಂದು ಕರೆದು ಅಪಮಾನಿಸಿದ್ದಾರೆ. ಇದರ ಜತೆಗೆ ಪ್ರಕರಣವೊಂದರಲ್ಲಿ ಮಣಿಕಂಠ ಅವರಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರನ್ನೂ ನಿಂದನೆ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತ ಹಣಮಂತ ದೂರು ನೀಡಿದ್ದರು. ಈ ಕುರಿತು ಚಿತ್ತಾಪುರದಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...