ಕಲಬುರಗಿ| ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 15 ರಂದು ಸೋಮವಾರ ಬೆಳಿಗ್ಗೆ 8 ಗಂಟೆಗೆ ಕಲಬುರಗಿ ಜಗತ್ ವೃತ್ತದ ಡಾ. ಬಿ.ಆರ್. ಅಂಬೇಡ್ಕತ್ ಪುತ್ಥಳಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ ಹಾಗೂ ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ. ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಹಾಗೂ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ್ ಜಾನೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್, ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ. ಸುಶೀಲಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಟಿ.ಸಿ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...