ಕಲಬುರಗಿ| ಪ್ರಜಾಪ್ರಭುತ್ವ ಬೆಳೆಸುವದು ನಮ್ಮೆಲ್ಲರ ಕರ್ತವ್ಯ: ಡಾ. ನಯನತಾರಾ 

Date:

Share post:

ಕಲಬುರಗಿ: ಪ್ರಜಾಪ್ರಭುತ್ವ ಬೆಳಸಬೇಕು ಅಂದರೆ ಮೊದಲು ಶಾಂತಿ ಬೇಕು,ಸಾಮಾನ್ಯ ಜನರಿಗೆ ಬೇಕಾಗಿರುವ ಸೌಲಭ್ಯಗಳು ಇರಬೇಕು ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ.ನಯನತಾರಾ ಸಿ. ಎ. ಹೇಳಿದರು.

ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂದುವರೆದು ಮಾತನಾಡುತ್ತಾ ಪ್ರತಿಯೊಬ್ಬ ಪ್ರಜೆಗೂ ಶಿಕ್ಷಣಬೇಕು, ಸಾಕ್ಷರತೆಬೇಕು ಅಂದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಹಾಗೂ ನಮ್ಮಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಉಪ ಪ್ರಾಚಾರ್ಯರಾದ ಪ್ರೊ. ವೀಣಾ ಎಚ್. ಅವರು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಗೀತಾ ಪಾಟೀಲ ಅವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಭಾಗದ ವಿದ್ಯಾರ್ಥಿನಿಯಾದ ದಿವ್ಯಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸವಿತಾ ಪ್ರಾರ್ಥನೆ ಗೀತೆ ಹಾಡಿದರು ಮತ್ತು ವೈಷ್ಣವಿ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಡಾ. ಶ್ರೀದೇವಿ ಸರಡಗಿ, ಡಾ. ನಾಗರತ್ನ ಎಸ್., ಸುಷ್ಮಾ ಕುಲಕರ್ಣಿ, ಬಸಮ್ಮ ಗೊಬ್ಬುರ, ಡಾ. ಮೋಹಸೀನಾ, ಕವಿತಾ ಅಶೋಕ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿಭಾಗದ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...