ಕಲಬುರಗಿ| ಸ್ಲಂ ಪ್ರದೇಶಗಳೆಂದು ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ

Date:

Share post:

ಕಲಬುರಗಿ: ಕಲಬುರಗಿ ಮತ್ತು ಯಾದಗೀರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ರಾಮ ನಗರ(ಭಾಗ-2) ಸಂಜುನಗರ (ಭಾಗ -2), ಮೋನೆಶ್ವರ ನಗರ, ಶಶಿಧರ ನಗರ, ಮದನಪೂರ (ಭಾಗ-2) ತಪ್ಪಡಗೇರಾ, ಗಂಗಾನಗರ, ಅಘೋಶಿತ ಸ್ಲಂ ಗಳನ್ನು ಸ್ಲಂ ಕಾಯ್ದೆ 1975 ರ ಕಲಂ 3 ಪಿ ಅಡಿಯಲ್ಲಿ ಸ್ಲಂ ಎಂದು ಘೋಷಿಸಿ ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕ, ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸ್ಲಂ ಘೋಷಣೆಗೆ 3 ವರ್ಷಗಳ ಕಾಲ ವಿಳಂಬ ನೀತಿ ಅನುಸರಿಸಿದ ಸ್ಲಂ ಬೋರ್ಡ್ ಅಧಿಕಾರಿಗಳಾದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರುಗಳಾದ ಶ್ರೀಧರ ಸಾರವಾಡ ಮತ್ತು ದೇವಿಂದ್ರಕುಮಾರ ಇವರುಗಳನ್ನು ಅಮಾನತ್ತು ಮಾಡಿ ಆದೇಶಿಸಬೇಕು ಎಂದು ಆಗ್ರಹಿಸಿದರು.

 

ಸ್ಲಂ ಗಳಲ್ಲಿ ಅಲೆಮಾರಿ ಜನಾಂಗ, ಎಸ್ ಸಿ ಜನಾಂಗದವರು ಹೆಚ್ಚು ವಾಸ ಮಾಡುತ್ತಿದ್ದಾರೆ, ಈ ಸ್ಲಂಗಳನ್ನು ಘೋಷಣೆ ಮಾಡಿ ನೀರು, ಚರಂಡಿ ಬೀದಿ ದೀಪ ಅಳವಡಿಕೆ, ರಸ್ತೆ ನಿರ್ಮಾಣ ಮತ್ತು ಮಹಿಳೆಯರಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡಲು ಸುಮಾರು ಮೂರು ವರ್ಷಗಳಿಂದ ಹೋರಾಟದ ಮುಖಾಂತರ ಮನವಿ ನೀಡಿದರು ಕೂಡ ಸಹಾಯಕ ಕಾರ್ಯನಿರ್ವಾಹ ಅಭಿಯಂತರುಗಳು ಇವರೆಗೆ ಕ್ರಮ ಕೈಗೊಂಡಿಲ್ಲ, ಹಾಗಾಗಿ ಅಂತಹ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದರು.

 

ಸಾಮಾಜಿಕ ನ್ಯಾಯದಡಿ ಸಂವಿಧಾನ ಬದ್ದ ಹಕ್ಕುಗಳಾದ ಅಘೋಷಿತ ಸ್ಲಂ ಗಳನ್ನು ಶೀಘ್ರದಲ್ಲಿ ಸ್ಲಂ ಎಂದು ಘೋಷಿಸಲು ಅಧಿಕಾರಿಗಳಿಗೆ ಆದೇಶಿಸಬೇಕು ಮತ್ತು ಸುಮಾರು ವರ್ಷಗಳಿಂದ ಸ್ಲಂ ಜನರಿಗೆ ಮೂಲಭೂತ ಸೌಲಭ್ಯಗಳಾದ ನೀರು ಚರಂಡಿ ಬೀದಿ ದೀಪ, ಮಹಿಳೆಯರಿಗೆ ಶೌಚಾಲಯಗಳನ್ನು ಒದಗಿಸದ ಸಹಾಯಕ ಕಾರ್ಯನಿರ್ವಾಕ ಅಭಿಯಂತರರನ್ನು ಕೂಡಲೆ ಅಮಾನತ್ ಮಾಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಧ್ಯಕ್ಷ ಹಣಮಂತ ಶಹಾಪೂರಕರ್, ಉಪಾಧ್ಯಕ್ಷೆ ದ್ಯಾನಮ್ಮ, ಸಂಚಾಲಕಿ ರೇಣುಕಾ ಸರಡಗಿ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...