ಕಲಬುರಗಿ| ಕುರುಬ ಸಮಾಜ ಶೌರ್ಯಕ್ಕೆ ಹೆಸರಾದ ಸಮಾಜ: ಸಚಿವ ಪ್ರಿಯಾಂಕ್ ಖರ್ಗೆ

Date:

Share post:

ಕಲಬುರಗಿ: ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಾಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ನವರು ಹೆಸರಾಗಿದ್ದಾರೆ ಎಂದುಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಹಾಲುಮತ ಸಮಾಜ ನಂಬಿಕೆಗೆ ದ್ರೋಹ ಮಾಡದವರು. ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ‌ ನುಡಿದಂತೆ ನಡೆಯುತ್ತಿದೆ. ಚುನಾವಣೆಗೆ ಮುನ್ನ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಕುರುಬ ಸಮಾಜಕ್ಕೆ 3 ಎಕರೆ‌ಜಾಗ ಮೀಸಲು,‌ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡುವ ಬೇಡಿಕೆ ಬಹಳ‌ದಿನದಿಂದ‌ ನೆನೆಗುದಿಗೆ ಬಿದ್ದಿತ್ತು. ಆದರೆ, ಅಡೆತಡೆಗಳನ್ನು‌ ನಿವಾರಿಸಿ ಬೇಡಿಕೆ ಈಡೇರಿಸಲಾಗಿದೆ ಎಂದರು.

ಸುಳ್ಳಿನ ಮಾತುಗಳನ್ನು ನಂಬಬೇಡಿ. ನಿಮ್ಮ ಪರವಾಗಿ ಕೆಲಸ ಮಾಡುವವರನ್ನು, ಅಭಿವೃದ್ದಿ ಕೆಲಸ ಮಾಡುವವರನ್ನು ಬೆಂಬಲಿಸಿ. ದೇಶದಲ್ಲಿ ವಿಚಿತ್ರ ವಾತಾವರಣ ಸೃಷ್ಠಿಯಾಗಿದೆ. ಸಂವಿಧಾನದ ರಕ್ಷಣೆ ಒಂದೆಡೆಯಾದರೆ ಮನುಸ್ಮೃತಿ ‌ಜಾರಿಗೆ ಮತ್ತೊಂದು ಕಡೆ ಪ್ರಯತ್ನ ನಡೆಯುತ್ತಿದೆ. ಆದರೆ ಈ ಷಡ್ಯಂತ್ರದ ವಿರುದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಹೋರಾಟ ನಡೆಸುತ್ತಿದ್ದಾರೆ. ನೀವೆಲ್ಲ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.

 

ಸಚಿವ ಭೈರತಿ ಸುರೇಶ್ ಮಾತನಾಡಿ, ಶಿಕ್ಷಣದಿಂದಲೇ ಅಭಿವೃದ್ದಿ ಸಾಧ್ಯ.‌ಕುರುಬರು ಶಿಕ್ಷಣ‌ಕ್ಕೆ ಮಹತ್ವ ನೀಡಬೇಕು ಎಂದು ಕರೆ ನೀಡಿದರು.

ವೇದಿಕೆಯ ಮೇಲೆ ಸಿದ್ದರಾಮನಂದ ಮಹಾಸ್ವಾಮಿ, ಮಾಳಿಂಗರಾಯ ಮಹಾರಾಜ, ಹವಾ ಮಲ್ಲಿನಾಥ ಮಹಾರಾಜ, ಎಂ.ಪಿ ರಾಧಾಕೃಷ್ಣ ದೊಡ್ಡ ಮನಿ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಗುರುನಾಥ ಎಸ್ ಪೂಜಾರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...