ಕಲಬುರಗಿ| ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಲು ಹಾಗೂ ಕಾನೂನು ಸೇವಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಶಿಕ್ಷಕರು/ನಿವೃತ್ತ ಶಿಕ್ಷಕರು, ಮಾಜಿ ಗ್ರಾಮ ಪಂಚಾಯತಿ ಸದಸ್ಯರು, ನಿವೃತ್ತ ಸರ್ಕಾರಿ ನೌಕರರು /ಹಿರಿಯ ನಾಗರಿಕರು, ಕಾನೂನು ಕ್ಷೇತ್ರದಲ್ಲಿ ತೊಡಗಿಸಿಕೊಂಡ ಸಾಮಾಜಿಕ ಕಾರ್ಯಕರ್ತರು, ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಾನೂನು ವಿದ್ಯಾರ್ಥಿಗಳು, ರಾಜಕೀಯ ಪಕ್ಷಕ್ಕೆ ಸೇರದ ಸಂಘದವರು, ಸ್ವ-ಸಹಾಯ ಮಹಿಳಾ ಗುಂಪಿನವರು, ಮಾಜಿ ಸೈನಿಕರು ಹಾಗೂ ಸೈನಿಕರ ಪತ್ನಿಯರು ಅಥವಾ ವಯಸ್ಕ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

 

ಅರೆ-ಕಾಲಿಕ ಸ್ವಯಂ ಸೇವಕರ ನೇಮಕಾತಿಗಾಗಿ ಸಮಿತಿ ರಚನೆಯಾಗಿದ್ದು, ಅವಶ್ಯಕತೆ ಇದ್ದಲ್ಲಿ ಸಂದರ್ಶನದ ಮೂಲಕ ಅರೇ ಕಾಲಿಕ ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗುತ್ತದೆ. ಆರೆ-ಕಾಲಿಕ ಸ್ವಯಂ ಸೇವಕರು ಸಲ್ಲಿಸುವ ಸೇವೆಗೆ ಯಾವುದೇ ವೇತನ/ಶುಲ್ಕ ಇರುವುದಿಲ್ಲ. ಆದರೆ ಕೆಲವೂಮ್ಮೆ ಗೌರವಧನಕ್ಕಾಗಿ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಗೆ 2025ರ ಸೆಪ್ಟೆಂಬರ್ 29 ರಂದು ಕೊನೆಯ ದಿನವಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...