ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರತಿ ವರ್ಷದಂತೆ 2025-26ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ನಾವೀನ್ಯತೆ (Innovation), ತಾರ್ಕಿಕ ಸಾಧನೆಗಳು (Scholastic), ಕ್ರೀಡೆ (Sports), ಕಲೆ, ಸಾಂಸ್ಕøತಿಕ ಹಾಗೂ ಸಂಗೀತ (Art, Cultural, Music) ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪೆÇ್ರೀತ್ಸಾಹಿಸಲು ಹಾಗೂ ಕರ್ನಾಟಕ ರಾಜ್ಯದಲ್ಲಿ ನೆಲೆಸಿರುವ 05 ರಿಂದ 18 ವರ್ಷದÀ ವಯೋಮಿತಿಯ ಮಕ್ಕಳಿಗೆ ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಆಯ್ಕೆ ಮಾಡಿ ತಲಾ 10,000 ರೂ.ಗಳ ನಗದು ಒಳಗೊಂಡಂತೆ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ 2025ರ ಅಕ್ಟೋಬರ್ 6ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.


