ಕಲಬುರಗಿ| ಆದರ್ಶ ವ್ಯಕ್ತಿಗಳ ಬಾಳು ನಮಗೆ ಆದರ್ಶವಾಗಲಿ: ಡಾ.ಶರಬಯ್ಯ ಸ್ವಾಮಿ

Date:

Share post:

ಕಲಬುರಗಿ: ಆದರ್ಶ ವ್ಯಕ್ತಿಗಳ ಬಾಳು ನಮಗೆ ಆದರ್ಶವಾಗಲಿ ಎಂದು ಚಾಂದ ಬೀಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಶರಬಯ್ಯ ಸ್ವಾಮಿ ಹೇಳಿದ್ದಾರೆ.

ನಗರದ ಶರಣಬಸವ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಎಂ.ಎ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕದಲ್ಲಿ ಹಾಗೂ ಭಾರತದಲ್ಲಿಯೇ ಶರಣಬಸವ ವಿಶ್ವವಿದ್ಯಾಲಯಕ್ಕೆ ಅತ್ಯಂತ ಉತ್ತಮ ಮತ್ತು ಖ್ಯಾತ ಹೆಸರನ್ನು ಹೊಂದಿದೆ. ಇಲ್ಲಿ ನೀವು ಕಲಿತಿರುವುದು ತುಂಬಾ ಸಂತಸ ಮೂಡಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಆದರ್ಶ ವ್ಯಕ್ತಿಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಜೀವನವನ್ನು ಸುಂದರಗೊಳಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮುಂದುವರೆದು ಪ್ರತಿಯೊಬ್ಬ ವಿದ್ಯಾರ್ಥಿಯು ಉದಾತ್ತ ಆದರ್ಶಗಳು, ಉತ್ತಮ ಜೀವನ ಮೌಲ್ಯಗಳು, ಉನ್ನತವಾದ ಗುರಿಯನ್ನು ಹೊಂದಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹುರಿದುಂಬಿಸಿದರು.

ಉದ್ಘಾಟಕರಾಗಿ ಭಾಗವಹಿಸಿದ ಶರಣಬಸವ ವಿವಿಯ ಕುಲಸಚಿವ(ಮೌಲ್ಯಮಾಪನ) ಡಾ. ಎಚ್.ಎಸ್. ಹೊನ್ನಳ್ಳಿ ಮಾತನಾಡಿ, ವಿದ್ಯಾರ್ಥಿಗಳಿಗೆ ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ನಾತಕೋತ್ತರ ಪದವಿ ಪಡೆದ ಕನ್ನಡ ವಿದ್ಯಾರ್ಥಿಗಳು ಉದ್ಯೋಗವನ್ನು ಪಡೆಯಬೇಕಾದರೆ ತಾಂತ್ರಿಕತೆಯನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಡಾ. ಸುಮಂಗಲಾ ಎನ್.ರಡ್ಡಿ ಮಾತನಾಡಿ, ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಎಂ.ಎ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರದ ಹಲವು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಹೆಸರನ್ನು ಬೆಳಗಿಸಿದ್ದಾರೆ ಎಂದರು.

ಕನ್ನಡ ಸಾಹಿತ್ಯದ ವಿದ್ಯಾರ್ಥಿಗಳು ಕನ್ನಡತನವನ್ನು ಮೈಗೂಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಸಾಹಿತ್ಯ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು.

ಇದೇ ಸಂದರ್ಭದಲ್ಲಿ ಕೆ -ಸೆಟ್,ನೆಟ್ ಪದವಿಯನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಮಮತಾ ಭವಾನಿ ನೆರವೇರಿಸಿದರು. ಸ್ವಾಗತವನ್ನು ಶ್ರೀಶೈಲ,ಪ್ರಾಸ್ತಾವಿಕ ಭಾಷಣವನ್ನು ಸಾಕ್ಷಿ ಗೌಳಿ ಮಾಡಿದರು. ವಂದನಾರ್ಪಣೆ ಸಿದ್ದಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಪಕರುಗಳಾದ ಡಾ. ಪ್ರಭಾವತಿ ಚಿತಕೋಟಿ,ಡಾ. ಚಿದಾನಂದ ಚಿಕ್ಕಮಠ,ಡಾ ಚನ್ನಮ್ಮ ಎನ್. ಅಲ್ಬಾ, ಡಾ.ಕರೆಯಣ್ಣ ದೇವಪುರ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...