ಕಲಬುರಗಿ| ಸಖಿ‌ ಸೆಂಟರ್ ನ ನೂತನ ವಾಹನಗಳಿಗೆ ಜಿಲ್ಲಾಧಿಕಾರಿಗಳಿಂದ ಚಾಲನೆ

Date:

Share post:

ಕಲಬುರಗಿ: ಕೇಂದ್ರ ಸರ್ಕಾರದ “ಮಿಷನ್ ಶಕ್ತಿ” ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಫ್ ಸೆಂಟರ್ ಗೆ ನೋಂದ ಮಹಿಳೆಯರಿಗೆ ಸಹಾಯ ಒದಗಿಸಲು ಬಾಡಿಗೆ ಮೇಲೆ ಪಡೆಯಲಾದ ಎರಡು ವಾಹನಗಳಿಗೆ ಗುರುವಾರ ನಗರದ ಪ್ರಗತಿ ಕಾಲೋನಿಯಲ್ಲಿರುವ ಸಖಿ ಸೆಂಟರ್ ಅವರಣದಲ್ಲಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಚಾಲನೆ ನೀಡಿದರು.

ಒನ್ ಸ್ಟಾಪ್ ಸೆಂಟರ್ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಅಪ್ತ ಸಮಾಲೋಚನೆ, ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಪೋಲಿಸ್ ನೆರವು ಹಾಗೂ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ.

 

ನೂತನ ವಾಹನಗಳನ್ನು ಬಳಸಿಕೊಂಡು ನೋಂದ, ಸಂಕಷ್ಟದಲ್ಲಿದ್ದ ಹಾಗೂ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ಸೇವೆ ಹಾಗೂ ಸೂಕ್ತ ನೆರವು ಒದಗಿಸಲು ತ್ವರಿತವಾಗಿ ಧಾವಿಸಬೇಕು ಮತ್ತು ವಿವಿಧ ಇಲಾಖೆಗಳೊಮದಿಗೆ ಸಮನ್ವಯ ಸಾಧಿಸಬೇಕೆಂದು ಅಧಿಕಾರಿಗಳಿಗೆ ಡಿ.ಸಿ. ಸೂಚಿಸಿದರು. ಇದೇ ಸಂದರ್ಭದಲ್ಲಿ ಪೋಷಣ ಅಭಿಯಾನ್ ಯೋಜನೆಯಡಿ ಸಖಿ ಕೇಂದ್ರಕ್ಕೆ ಸ್ಮಾರ್ಟ ಮೋಬೈಲ್ ಸಹ ವಿತರಿಸಲಾಯಿತು.

ಡಿ.ಎಚ್.ಓ ಡಾ. ಶರಣಬಸಪ್ಪ ಕ್ಯಾತನಾಳ, ಮಹಿಳಾ ಮತ್ತು‌ ಮಕ್ಕಳ ಅಭಿವರಸ್ದಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಿವಶರಣಪ್ಪ, ಜಿಲ್ಲಾ ನಿರೂಪಣಾಧಿಕಾರಿ ಮುರುಗೇಶ ಗುಣಾರಿ, ಡಿ.ಸಿ.ಪಿ.ಓ ಮಂಜುಳಾ ಪಾಟೀಲ್, ವಿಜಯಲಕ್ಷ್ಮೀ ಜಾಧವ್, ಗೀತಾ ಪಾಟೀಲ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...