ಕಲಬುರಗಿ| ಕನ್ನಡ ವಿಭಾಗಗಳ ತಿಳುವಳಿಕೆ ಪತ್ರಕ್ಕೆ ಸಹಿ

Date:

Share post:

ಕಲಬುರಗಿ: ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಕನ್ನಡ ವಿಭಾಗಗಳ ಮಧ್ಯೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಈ ಎರಡು ಪ್ರತಿಷ್ಠಿತ ಸಂಸ್ಥೆಗಳ ಮಧ್ಯೆ ತಿಳುವಳಿಕೆ ಒಡಂಬಡಿಕೆ ಈ ಎರಡು ಸಂಸ್ಥೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸರ್ಕಾರಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ ಸವಿತಾ ತಿವಾರಿ ಅವರು ಹೇಳಿದರು.

ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಪಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅನುಕೂಲಕ್ಕಾಗಿ ಈ ರೀತಿಯ ಒಡಂಬಡಿಕೆ ಮಾಡಿಕೊಳುವುದು ಇಂದಿನ ಸಂದರ್ಭದಲ್ಲಿ ಅನಿವಾರ್ಯ ಎಂದರು.

ತಿಳುವಳಿಕೆ ಪತ್ರ ಸಹಿ ಸಂದರ್ಭದಲ್ಲಿ ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಶಾರದಾದೇವಿ ಜಾಧವ, ಡಾ. ನಾಗಪ್ಪ ಗೋಗಿ ಮತ್ತು ಪ್ರೊ. ಶ್ರೀದೇವಿ ರಾಠೋಡ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗದ ಕವಿತಾ ಅಶೋಕ, ದಾನಮ್ಮ ಕೋರವಾರ ಹಾಗೂ ಬಸಮ್ಮ ಬಿರಾದಾರ ಅವರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...