ಕಲಬುರಗಿ: ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗವು “ಜಿನೋ-ಸೆಲ್ ಗ್ಯಾಲಕ್ಸಿ 2025″ ಎಂಬ ಭವ್ಯ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನು ಡಾ. ಚಂದ್ರಕಲಾ ಪಾಟೀಲ್ ನಿವೃತ್ತ ಪ್ರಾಧ್ಯಾಪಕರು ಇವರು ಉದ್ಘಾಟಿಸಿ ಮಾತನಾಡುತ್ತಾ, ಇಂತಹ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಮಕ್ಕಳಿಗೆ ಕಲಿಕೆಯ ಜೊತೆಗೆ ಅವರಲ್ಲಿನ ಸೂಪ್ತ ಪ್ರತಿಭೆ ಹೊರಬರಲು ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದರು.
ವಿದ್ಯಾರ್ಥಿಗಳು ನವೀನ ಮಾದರಿಗಳು ಮತ್ತು ಪ್ರದರ್ಶನಗಳನ್ನು ಪ್ರದರ್ಶಿಸಿದ ಜೈವಿಕ ತಂತ್ರಜ್ಞಾನ ಪ್ರಯೋಗಾಲಯದಲ್ಲಿ ನಡೆದ ಜೈವಿಕ ಬಾಹ್ಯಾಕಾಶ ಮೇಳ ಈ ಎರಡು ಪ್ರಮುಖ ಮುಖ್ಯಾಂಶಗಳನ್ನು ಒಳಗೊಂಡಿತ್ತು.
ಇದೇ ಸಂದರ್ಭದಲ್ಲಿ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚರ್ಚಾ ಸ್ಪರ್ಧೆ”ಜೈವಿಕ ಮೆದುಳಿನ ಕದನ” ಎಂಬ ವಿಷಯದಲ್ಲಿ ವಿದ್ಯಾರ್ಥಿನಿಯರು ಬಹಳ ಆಸಕ್ತಿಯಿಂದ ಭಾಗವಹಿಸಿ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ರಸಪ್ರಶ್ನೆ ಸ್ಪರ್ಧೆಯ ಮೆರಗು ಹೆಚ್ಚಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಚತೆಯನ್ನು ಪ್ರಾಂಶುಪಾಲರಾದ ಡಾ. ಆರ್. ಬಿ. ಕೊಂಡ ವಹಿಸಿಕೊಂಡು ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇಂತಹ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಮಂಡಿರುವದು ಶ್ಲಾಘನೀಯ ಎಂದು ಹೇಳುತ್ತಾ, ಮುಂಬರುವ ದಿನಗಳಲ್ಲಿ ಅಂತರ್ ಮಹಾವಿದ್ಯಾಲಯ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.
ಉಪ ಪ್ರಾಂಶುಪಾಲರಾದ ಡಾ. ವೀಣಾ ಎಚ್ ಅವರ ಬೆಂಬಲದೊಂದಿಗೆ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಮಂಗಳಾ ಬಿರಾದಾರ್ ಮತ್ತು ಉಪನ್ಯಾಸಕಿ ಸೇಜಲ್ ಎನ್. ಚಾವ್ಡಾ ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಎಂದು ಮಹಾವಿದ್ಯಾಲಯದ ಮಾಧ್ಯಮ ಸಮಿತಿಯ ಡಾ.ಮಹೇಶ ಗಂವ್ಹಾರ ತಿಳಿಸಿದ್ದಾರೆ.


