ಕಲಬುರಗಿ| ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನಲ್ಲಿ ಜಿನೋ-ಸೆಲ್ ಗ್ಯಾಲಕ್ಸಿ -2025 ಪ್ರದರ್ಶನ

Date:

Share post:

ಕಲಬುರಗಿ: ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗವು “ಜಿನೋ-ಸೆಲ್ ಗ್ಯಾಲಕ್ಸಿ 2025″ ಎಂಬ ಭವ್ಯ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮವನ್ನು ಡಾ. ಚಂದ್ರಕಲಾ ಪಾಟೀಲ್ ನಿವೃತ್ತ ಪ್ರಾಧ್ಯಾಪಕರು ಇವರು ಉದ್ಘಾಟಿಸಿ ಮಾತನಾಡುತ್ತಾ, ಇಂತಹ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಮಕ್ಕಳಿಗೆ ಕಲಿಕೆಯ ಜೊತೆಗೆ ಅವರಲ್ಲಿನ ಸೂಪ್ತ ಪ್ರತಿಭೆ ಹೊರಬರಲು ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದರು.

ವಿದ್ಯಾರ್ಥಿಗಳು ನವೀನ ಮಾದರಿಗಳು ಮತ್ತು ಪ್ರದರ್ಶನಗಳನ್ನು ಪ್ರದರ್ಶಿಸಿದ ಜೈವಿಕ ತಂತ್ರಜ್ಞಾನ ಪ್ರಯೋಗಾಲಯದಲ್ಲಿ ನಡೆದ ಜೈವಿಕ ಬಾಹ್ಯಾಕಾಶ ಮೇಳ ಈ ಎರಡು ಪ್ರಮುಖ ಮುಖ್ಯಾಂಶಗಳನ್ನು ಒಳಗೊಂಡಿತ್ತು.

‌ಇದೇ ಸಂದರ್ಭದಲ್ಲಿ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚರ್ಚಾ ಸ್ಪರ್ಧೆ”ಜೈವಿಕ ಮೆದುಳಿನ ಕದನ” ಎಂಬ ವಿಷಯದಲ್ಲಿ ವಿದ್ಯಾರ್ಥಿನಿಯರು ಬಹಳ ಆಸಕ್ತಿಯಿಂದ ಭಾಗವಹಿಸಿ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ರಸಪ್ರಶ್ನೆ ಸ್ಪರ್ಧೆಯ ಮೆರಗು ಹೆಚ್ಚಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಚತೆಯನ್ನು ಪ್ರಾಂಶುಪಾಲರಾದ ಡಾ. ಆರ್. ಬಿ. ಕೊಂಡ ವಹಿಸಿಕೊಂಡು ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇಂತಹ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಮಂಡಿರುವದು ಶ್ಲಾಘನೀಯ ಎಂದು ಹೇಳುತ್ತಾ, ಮುಂಬರುವ ದಿನಗಳಲ್ಲಿ ಅಂತರ್ ಮಹಾವಿದ್ಯಾಲಯ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ಉಪ ಪ್ರಾಂಶುಪಾಲರಾದ ಡಾ. ವೀಣಾ ಎಚ್ ಅವರ ಬೆಂಬಲದೊಂದಿಗೆ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಮಂಗಳಾ ಬಿರಾದಾರ್ ಮತ್ತು ಉಪನ್ಯಾಸಕಿ ಸೇಜಲ್ ಎನ್. ಚಾವ್ಡಾ ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಎಂದು ಮಹಾವಿದ್ಯಾಲಯದ ಮಾಧ್ಯಮ ಸಮಿತಿಯ ಡಾ.ಮಹೇಶ ಗಂವ್ಹಾರ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...